ಶಿವಮೊಗ್ಗ, ಜೂನ್ 12, : 2023-24 ನೇ ಸಾಲಿಗೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ಸೊರಬ ವ್ಯಾಪ್ತಿಯಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ.ಜಾ /ಪ.ವ. ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಪ್ರವೇಶ ಕೋರಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಸತಿ ನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು www.sw.kar.nic.in ಅಥವಾ www.shp.kar.gov.in (ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶ) ರಲ್ಲಿ ಜೂನ್ -15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರವೇಶ ಪಡೆಯಲು ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೆÇೀಷಕರ ಆಧಾರ್ ಕಾರ್ಡ್, ವಿದ್ಯಾರ್ಥಿಯ ಎಸ್.ಎ.ಟಿ.ಎಸ್ ಸಂಖ್ಯೆ, ಹಿಂದಿನ ತರಗತಿಯಲ್ಲಿ ಪಾಸಾದ ಅಂಕಪಟ್ಟಿ, ವಿದ್ಯಾರ್ಥಿಯ 4 ಭಾವಚಿತ್ರಗಳು, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಈ ಎಲ್ಲಾ ದಾಖಲೆಗಳಿಗೆ ಶಾಲಾ ಮುಖ್ಯೋಪಾಧ್ಯಯರು/ಪ್ರಾಂಶುಪಾಲರಿಂದ ದೃಢೀಕರಿಸಿಕೊಂಡು ಸಹಾಯಕ ನಿರ್ದೇಶಕರು (ಗ್ರೇಡ್2), ಸಮಾಜ ಕಲ್ಯಾಣ ಇಲಾಖೆ ಕಚೇರಿ, ಸೊರಬ ಅಥವಾ ಆಯಾ ವಿದ್ಯಾರ್ಥಿ ನಿಲಯಗಳಿಗೆ ಸಲ್ಲಿಸುವುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಸೀಟುಗಳ ಲಭ್ಯತೆ ಅನುಸಾರ ತಾಲ್ಲೂಕು ಮಟ್ಟದ ಆಯ್ಕೆ ಸಮಿತಿ ಮೂಲಕ ಇಲಾಖಾ ನಿಯಮಗಳನ್ವಯ ಪ್ರವೇಶಗಳನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 9480843195 ಅಥವಾ ಆಯಾ ವಸತಿ ನಿಲಯದ ಮೇಲ್ವಿಚಾರಕರನ್ನು ಸಂಪರ್ಕಿಸುವಂತೆ ಸೊರಬ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-2) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
———————————–.
