ಶಿವಮೊಗ್ಗ, ಆಗಸ್ಟ್ 11: ಜಿಲ್ಲಾ ಪಂಚಾಯತ್ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯು ಶಿಕ್ಷಣ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಸೆಪ್ಟಂಬರ್ 13ರಂದು ಬೆಳಿಗ್ಗೆ 10ಗಂಟಗೆ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ಸಾಬ್ ಸಭಾಂಗಣದಲ್ಲಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಈ.ಕಾಂತೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ತಜ್ಞ ಮನೋವೈದ್ಯ ಡಾ||ಸಂಜಯ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ತರಬೇತಿ ನೀಡುವರು. ಸದರಿ ಸಭೆಗೆ ಹಾಗೂ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯಾಧಿಕಾರಿಗಳು, ಸಮಾಲೋಚಕರು ಹಾಗೂ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬ್ಲಾಕ್ ಹಾಗೂ ಕ್ಲಸ್ಟರ್ ಮಟ್ಟದ ಸಂಪನ್ಮೂಲ ಶಿಕ್ಷಕರು ಉಪಸ್ಥಿತರಿರುವರು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ|| ರಂಗಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.