ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆಗೊಂಡು ಮಾತನಾಡಿ, ಡಾಕ್ಟರ್ ಧನಂಜಯ ಸರ್ಜಿ ದೇಶದ ಮೂಲಸೌಕರ್ಯಕ್ಕೆ ಕೊಡುಗೆ, ಸೈನಿಕರಿಗೆ ಶಕ್ತಿ ತುಂಬುವ ಕೆಲಸ ಹಾಗೂ ಎಲ್ಲ ವರ್ಗದ ಜನರಿಗೂ ಅಗತ್ಯ ಯೋಜನೆಗಳ ಜಾರಿ ಸೇರಿದಂತೆ ದೇಶವನ್ನು ಅಭಿವೃದ್ಧಿ ಪಥದಲ್ಲಿ ಪ್ರಧಾನಿ ಮೋದಿ ಮುನ್ನಡೆಸುತ್ತಿದ್ದಾರೆ ಎಂದು ತಿಳಿಸಿದರು.


ಸಾಗರದ ಯುವ ಮುಖಂಡ ಕೆ.ಎಸ್.ಪ್ರಶಾಂತ್ ಮಾತನಾಡಿ, ಪ್ರಸ್ತುತ ಯುವನಾಯಕ ಬಿ.ವೈ.ರಾಘವೇಂದ್ರ ಅಭಿವೃದ್ಧಿ ಕಾರ್ಯ ನಡೆಸುತ್ತಿದ್ದ ರೀತಿಯಿಂದ ಪ್ರೇರಣೆಯಾಗಿ ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದೇನೆ ಎಂದರು.
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮಾತನಾಡಿ, ಮೋದಿ ನಾಯಕತ್ವ ಹಾಗೂ ಆಡಳಿತ ಶೈಲಿ ಮೆಚ್ಚಿ ವಿವಿಧ ಕ್ಷೇತ್ರದ ನಾಯಕರು ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರೆ. ಪಕ್ಷ ಸಂಘಟನೆ ಬಲಿಷ್ಠಗೊಳಿಸುವ ಜತೆಯಲ್ಲಿ ದೇಶದ ಅಭಿವೃದ್ಧಿ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದರು.
ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, ಭಾರತೀಯ ಜನತಾ ಪಕ್ಷದ ತತ್ವ ಹಾಗೂ ಸಿದ್ಧಾಂತಗಳನ್ನು ಗಮನಿಸಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಎಲ್ಲರಿಗೂ ಸ್ವಾಗತ. ಮಾದರಿ ಜಿಲ್ಲೆ ಹಾಗೂ ತಾಲೂಕುಗಳನ್ನು ರೂಪಿಸುವ ಕಾರ್ಯದಲ್ಲಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ, ಪ್ರಶಿಕ್ಷಣ ಪ್ರಕೋಷ್ಠಗಳ ಸಂಚಾಲಕ ಆರ್.ಕೆ.ಸಿದ್ದರಾಮಣ್ಣ, ಪ್ರಮುಖರಾದ ಗೀರೀಶ್ ಪಟೇಲ್, ಎನ್.ನಾಗರಾಜ್, ಎಸ್.ಎನ್.ಚನ್ನಬಸಪ್ಪ, ಜಗದೀಶ್ ಉಪಸ್ಥಿತರಿದ್ದರು.

error: Content is protected !!