ಶಿವಮೊಗ್ಗ, ಜನವರಿ 19 : ಯೋಗ, ಬುದ್ಧಿವಂತಿಕೆ ಮತ್ತು ನೈತಿಕತೆಯ ವಿಷಯಗಳನ್ನು ಹೆಚ್ಚಾಗಿ ಪ್ರತಿಪಾದಿಸಿದವರು ಯೋಗಿ ವೇಮನ ಭಾರತೀಯ ತತ್ವಜ್ಞಾನಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಹಮ್ಮಿಕೊಂಡಿದ್ದ ಮಹಾಯೋಗಿ ವೇಮನ ಜಯಂತಿಯನ್ನು ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರುಳೀಧರ್, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ, ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಆರುಣ್ಕುಮಾರ್, ಜಿಲ್ಲಾ ರೆಡ್ಡಿ ಸಮಾಜದ ಅಧ್ಯಕ್ಷ ಭೀಮಾರೆಡ್ಡಿ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.