ಶಿವಮೊಗ್ಗ, ಮೇ.27: ಸಾಣೇಹಳ್ಳಿಯ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ 2019 ಹಾಗೂ 20ನೇ ಸಾಲಿನ ರಂಗಶಿಕ್ಷಣ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನಿಸಲಾಗಿದು,್ದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಪದವಿಧರರಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ.
ಒಂದು ವರ್ಷದ ಈ ಡಿಪ್ಲೋಮಾ ಕೋರ್ಸ್‍ನಲ್ಲಿ ಭಾರತೀಯ ರಂಗಭೂಮಿ, ಕನ್ನಡ ರಂಗಭೂಮಿ ಮತ್ತು ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ಹಾಗೂ ನಾಟಕ ಅಭ್ಯಾಸ, ಪ್ರದರ್ಶನ ಇನ್ನಿತರೆ ಚಟುವಟಿಕೆಗಳನ್ನು ನಡೆಸಲಾಗುತ್ತದೆ.
ಅರ್ಜಿಯನ್ನು ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ-577515, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ, ಇವರಿಂದ ಅಥವಾ ರಂಗಶಾಲೆಯ ವೆಬ್‍ಸೈಟ್ ತಿತಿತಿ.ಣheಚಿಣಡಿesಛಿhooಟsಚಿಟಿehಚಿಟಟi.oಡಿg ನಲ್ಲಿ ಡೌನ್‍ಲೋಡ್ ಮಾಡಿ ಜೂನ್ 30 ರೊಳಗಾಗಿ ಸಲ್ಲಿಸಲು ಸೂಚಿಸಲಾಗಿದೆ. ಜುಲೈ 1 ರಿಂದ 4 ರ ವರೆಗೆ ಅಭ್ಯರ್ಥಿಗಳಿಗೆ ಸಂದರ್ಶನ ನಡೆಯಲಿದ್ದು ಅಭ್ಯರ್ಥಿಗಳು ಎಲ್ಲಾ ದಿನವು ಪಾಲ್ಗೊಳ್ಳಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಜುಲೈ 15 ರಿಂದ ತರಗತಿಗಳು ಆರಂಭಗೊಳ್ಳಲಿದ್ದು, ಎರಡನೇ ವರ್ಷದ “ಶಿವಸಂಚಾರ” ಕಾರ್ಯಕ್ರಮದಲ್ಲಿ ಅಭ್ಯರ್ಥಿಗಳು ಪಾಲ್ಗೊಳ್ಳುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08199 243772, 9448398144, 9743095604 ಕ್ಕೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.