ಇಂದು ಜಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ ಬಿ.ಎಸ್. ಯಡಿಯೂರಪ್ಪನವರು ಮಾಧ್ಯಮದವರೊಂದಿಗೆ ಮಾತನಾಡಿರಂಜಾನ್ ಹಬ್ಬದ ಶುಭಾಶಯ ಕೋರಿ ಹಿಂದು ಮುಸ್ಲಿಂಮರು ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು ಎಲ್ಲರೂ ಕೂಡ ಸಹಕಾರ ನೀಡಬೇಕು
ಈಗಾಗಲೇ ಚುನಾವಣಾ ತಯಾರಿ ಪ್ರವಾಸವನ್ನು ಮಾಡುತ್ತಿದ್ದೇವೆ.ಈ ಬಾರಿ ಚುನಾವಣೆಯಲ್ಲಿ 150 ಕ್ಕೂ ಹೆಚ್ಚು ಸ್ಥಾನಗಳನ್ನು ರಾಜ್ಯದಲ್ಲಿ ಗೆಲ್ಲಬೇಕೆಂಬ ಗುರಿಯನ್ನು ಇಟ್ಟುಕೊಂಡು ಪ್ರಚಾರವನ್ನು ರಾಜ್ಯಾದ್ಯಂತ ಪ್ರವಾಸವನ್ನು ಆರಂಭ ಮಾಡುತ್ತಿದ್ದೇವೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಟ್ಟಂತº ಅನೇಕ ಜನಪ್ರಿಯÀ ಕಾರ್ಯಕ್ರಮಗಳನ್ನು ಇಟ್ಟುಕೊಂಡು ಮುಂದೆ ರಾಜ್ಯದಲ್ಲಿ ಬರಲಿರುವ ಚುನಾವಣೆಯನ್ನು ನಡೆಸುತ್ತೇವೆ.150 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಗುರಿ ಇದೆಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲೂ ಕೂಡ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾಳೆ ಮುಖ್ಯಮಂತ್ರಿ ಬೊಮ್ಮಾಯಿಯವರು ದೆಹಲಿಗೆ ತೆರಳುತ್ತಿದ್ದಾರೆ ಅಲ್ಲಿ ಅಮಿತ್ ಶಾ ಜೊತೆ ಕುಳಿತು ಚರ್ಚೆ ಮಾಡುತ್ತಾರೆ.
