
ಶಿವಮೊಗ್ಗ ಜೂನ್ 15,2022 : ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಜೂನ್ 16 ರಂದು ನಡೆಯಲಿರುವ ಕುವೆಂಪು ವಿಶ್ವವಿದ್ಯಾಲಯದ 31 ಮತ್ತು 32ನೇ ಘಟಿಕೋತ್ಸವಕ್ಕೆ ಭಾಗವಹಿಸಲು ಆಗಮಿಸುವ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲಿ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಅವರಿಗೆ ಭವ್ಯ ಸ್ವಾಗತ ಕೋರಿದರು.
ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ನಿರ್ಗಮಿಸಿದ ರಾಜ್ಯಪಾಲರು ಶಿವಮೊಗ್ಗಕ್ಕೆ ಆಗಮಿಸಿದಾಗ
ಜಿಲ್ಲಾಧಿಕಾರಿ ಡಾ. ಆರ್ ಸೆಲ್ವಮಣಿ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ವೀರಭದ್ರಪ್ಪ, ಕುಲ ಸಚಿವರುಗಳಾದ ಅನುರಾಧ, ನವೀನ್ ಕುಮಾರ್, ಕೃಷಿ ವಿಶ್ವವಿದ್ಯಾಲಯದ ಡಾ. ಎಂ. ಹನುಮಂತಪ್ಪ ಸ್ವಾಗತ ಕೋರಿದರು.