ಶಿವಮೊಗ್ಗ, ಡಿಸೆಂಬರ್ 31 ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಬೆಂಗಳೂರು, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಶಿವಮೊಗ್ಗ ಹಾಗೂ ಸಹಕಾರ ಇಲಾಖೆ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ ನಿ, ಶಿವಮೊಗ್ಗ ಮತ್ತು ಜಿಲ್ಲೆಯ ಮಾರಾಟ ಸಹಕಾರ ಸಂಘಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ರಾಜ್ಯ ಮಟ್ಟದ ಒಂದು ದಿನದ ಶಿಬಿರವನ್ನು 2022 ರ ಜ.02 ರ ಬೆಳಿಗ್ಗೆ 10 ಗಂಟೆಗೆ ತುಂತುರು ಫಾರಂ, ಗಾಜನೂರು ಅಗ್ರಹಾರ, ತೀರ್ಥಹಳ್ಳಿ ಮುಖ್ಯರಸ್ತೆ, ಗಾಜನೂರು ಇಲ್ಲಿ ಏರ್ಪಡಿಸಲಾಗಿದೆ.
ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಇವರು ಶಿಬಿರ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸುವರು. ಜಿಲ್ಲಾ ಸಹಕಾರ ಯೂನಿಯನ್ ನಿ, ಶಿವಮೊಗ್ಗದ ಅಧ್ಯಕ್ಷರಾದ ದುಗ್ಗೇಶ್ ಟಿ.ಎಸ್. ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾ ಮಂಡಳ ನಿ, ಬೆಂಗಳೂರಿನ ಅಧ್ಯಕ್ಷರು ಹಾಗೂ ಜಿಲ್ಲಾ ಸಹಕಾರ ಯೂನಿಯನ್ನ ನಿರ್ದೇಶಕರಾದ ಡಾ.ಬಿ.ಡಿ.ಭೂಕಾಂತ್, ರಾಜ್ಯ ಸಹಕಾರ ಮಹಾಮಂಡಳ ನಿ, ನಿರ್ದೇಶಕರುಗಳು, ವೃತ್ತಿಪರ ನಿರ್ದೇಧಶಕರು, ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದ ಉಪಾಧ್ಯಕ್ಷರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ, ಶಿವಮೊಗ್ಗದ ಉಪಾಧ್ಯಕ್ಷರು, ಜಿಲ್ಲಾ ಸಹಕಾರ ಯೂನಿಯನ್ನ ನಿರ್ದೇಶಕರುಗಳು, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ವ್ಯವಸ್ಥಾಪಕ ನಿರ್ದೇಶಕರು, ಕಾರ್ಯದರ್ಶಿಗಳು, ಸಹಕಾರ ಸಂಘಗಳ ಉಪನಿಬಂಧಕರು, ಸಹಾಯಕ ನಿಬಂಧಕರು, ಸಹಕಾರ ಸಂಘಗಳ ಲೆಕ್ಕಪರಿಶೋದನಾ ಉಪನಿರ್ದೇಶಕರು, ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ರಾಜ್ಯ ಸಹಕಾರ ಮಹಾಮಂಡಳದ ಸಹಾಯಕ ಯೋಜನಾಧಿಕಾರಿ ಹಾಗೂ ಸಮನ್ವಯ ಅಧಿಕಾರಿಗಳು, ಆಡಳಿತ ಮಂಡಳಿ ಪದಾಧಿಕಾರಿಗಳು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿ