ಶಿವಮೊಗ್ಗ, ಜನವರಿ 24 ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಾನಗರಪಾಲಿಕೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜನವರಿ 25 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಏರ್ಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮುಸ್ತಫಾ ಹುಸೇನ್.ಎಸ್.ಎ ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳಾದ ಡಾ.ಸೆಲ್ವಮಣಿ.ಆರ್ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ.ಕೆ.ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್, ಜಿ.ಪಂ ಸಿಇಓ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ, ಮಹಾನಗರಪಾಲಿಕೆ ಆಯುಕ್ತರಾದ ಚಿದಾನಂದ ಎಸ್. ವಟಾರೆ, ಶಿವಮೊಗ್ಗ ಉಪವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ಚುನಾವಣೆ ಶಾಖೆಯ ತಹಶೀಲ್ದಾರ್ ಮಂಜುಳಾ ಭಜಂತ್ರಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

error: Content is protected !!