ರಾಜ್ಯದ ಅತಿ ದೊಡ್ಡ ಜಲಾಶಯಗಳಲ್ಲಿ ಒಂದಾಗಿರುವ ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ ಜಲಾಶಯ ಇಂದು ಗರಿಷ್ಟ 1819 ಅಡಿ ತಲುಪಿದೆ. ಈ ಬಾರಿ ಜಿಲ್ಲೆಯಲ್ಲಿ ಬಿದ್ದ ಭಾರಿ ಮಳೆಯಿಂದಾಗಿ ಜಲಾಶಯಕ್ಕೆ ಅಧಿಕ ನೀರು ಬಂದಿದ್ದು, ಇಂದು ಜಲಾಶಯದ ಒಳ ಹರಿವು ಜಾಸ್ತಿಯಾದ ಹಿನ್ನಲೆಯಲ್ಲಿ ಜಲಾಶಯದಿಂದ 3 ಗೇಟ್ ಗಳ ಮೂಲಕ 5 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದೆ.