ಶಿವಮೊಗ್ಗ, ಫೆಬ್ರವರಿ 03 : 2022-23 ನೇ ಸಾಲಿಗೆ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ/ಡಾ.ಬಿಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಏರ್ಪಡಿಸಿರುವ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ್ದು,(2021-22 ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ) ಅರ್ಜಿ ಸಲ್ಲಿಸಲು ಜಿಲ್ಲೆಯ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. 6 ರಿಂದ 10 ನೇ ತರಗತಿವರೆಗೆ ಆಂಗ್ಲ ಮಾಧ್ಯಮದಲ್ಲಿ ಉಚಿತ ವಸತಿ, ಊಟ ಸಹಿತ ಶಿಕ್ಷಣ ನೀಡಲಾಗುವುದು.
ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ/ಸಾಮಾನ್ಯ/ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ/ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಫೆ.03 ರಿಂದ 22 ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಪ್ರಾಂಶುಪಾಲರು ಮೊ.ಸಂ: 9964760776, ಭದ್ರಾವತಿ ಪ್ರಾಂಶುಪಾಲರು ಮೊ.ಸಂ: 9902207754, ತೀರ್ಥಹಳ್ಳಿ ಪ್ರಾಂಶುಪಾಲರು ಮೊ.ಸಂ: 9481078559, ಶಿಕಾರಿಪುರ ಪ್ರಾಂಶುಪಾಲರು 9901325156, ಸೊರಬ ಪ್ರಾಂಶುಪಾಲರು 9538183801, ಸಾಗರ ಪ್ರಾಂಶುಪಾಲರು 9480767164, ಹೊಸನಗರ ಪ್ರಾಂಶುಪಾಲರು 9242875798 ಇವರನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

error: Content is protected !!