ಶಿವಮೊಗ್ಗ, ಮೇ 16: ಶಿಕಾರಿಪುರ ಹಾಗೂ ಸಾಗರ ತಾಲೂಕುಗಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಶಿಕಾರಿಪುರ ಮತ್ತು ಶಿರಾಳಕೊಪ್ಪ ಮೆಟ್ರಿಕ್ಪೂರ್ವ ಬಾಲಕ – ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ಶಿಕಾರಿಪುರ ಮತ್ತು ಸಾಗರ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಬಯಸುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಹಾಗೂ ಇತರೆ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳ ಪೋಷಕರ ಆದಾಯ ರೂ.1.00ಲಕ್ಷ ಆದಾಯ ಮಿತಿ ಮೀರಿರಬಾರದು. ಅಲ್ಪಸಂಖ್ಯಾತ ವರ್ಗಗಳ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಹಾಗೂ ಇತರೆ ಸಮುದಾಯದ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಸ್ಥಾನ ಮೀಸಲಿರಿಸಲಾಗಿದೆ.
ಪ್ರವೇಶ ಬಯಸುವ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ, ಚನ್ನಕೇಶವನಗರ, ಶಿಕಾರಿಪುರ ಮತ್ತು ಅಲ್ಪಸಂಖ್ಯಾತರ ಮಾಹಿತಿಕೇಂದ್ರ, ಶಿಕಾರಿಪುರ ಮತ್ತು ಸಾಗರ ಇಲ್ಲಿ ಅಧಿಕೃತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜೂ.16 ರೊಳಗೆ ಸಲ್ಲಿಸಲು ಕೋರಿದೆ.
ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ಮೊ.ಸಂ.: 9900132234ನ್ನು ಅಥವಾ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸುವಂತೆ ಸಾಗರ ತಾಲ್ಲೂಕು ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.