ಶಿವಮೊಗ್ಗ, ಏಪ್ರಿಲ್ 10, : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಚುನಾವಣಾ ನೀತಿ ಸಂಹಿತೆ ಅನುಷ್ಟಾನಕ್ಕಾಗಿ ಸರ್ಕಾರಿ ಅಧಿಕಾರಿ/ಸಿಬ್ಬಂದಿ ವರ್ಗದವರ ಹೆಚ್ಚಿನ ಅವಶ್ಯಕತೆ ಇರುವುದರಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಸಿಬ್ಬಂದಿ ಹಾಗೂ ಶಿಕ್ಷಕ ವರ್ಗದವರು ತಮ್ಮ ಇಲಾಖಾ ಮುಖ್ಯಸ್ಥರ ಪೂರ್ವಾನುಮತಿ ಪಡೆಯದೆ ಕೇಂದ್ರಸ್ಥಾನವನ್ನು ಬಿಡದೇ ಇರುವಂತೆ ಕ್ರಮ ಕೈಗೊಳ್ಳಲು ಜಿಲ್ಲೆಯ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚಿಸಿದ್ದಾರೆ.
ಹಾಗೂ ಈ ಬಗ್ಗೆ ಇಲಾಖಾ ಮುಖ್ಯಸ್ಥರುಗಳಿಗೆ ತಮ್ಮ ಇಲಾಖೆಯ ಅಧೀನ ಅಧಿಕಾರಿಗಳಿಗೆ ಈ ಕುರಿತು ಕಟ್ಟುನಿಟ್ಟಾಗಿ ಕ್ರಮ ವಹಿಸುವಂತೆ ನಿರ್ದೇಶಿಸಿದ್ದಾರೆ. ಮತ್ತು ಜಿಲ್ಲೆಯ ಎಲ್ಲಾ ಇಲಾಖೆಯ ಮುಖ್ಯಸ್ಥರುಗಳು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಅನುಮತಿಯನ್ನು ಪಡೆಯದೇ ತಮ್ಮ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ನಿರ್ದೇಶಿಸಿದ್ದಾರೆ.