ಶಿವಮೊಗ್ಗ, ಫೆಬ್ರವರಿ 03 : ನಗರದ ಬಾಲರಾಜ ಅರಸ್ ರಸ್ತೆಯಲ್ಲಿರುವ ವಿಶ್ವೋತ್ತಮ ಕಾಂಪ್ಲೆಕ್ಸ್ನಲ್ಲಿರುವ ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪಿ.ಯು.ಸಿ., ಬಿ.ಎ., ಬಿ.ಕಾಂ., ಬಿ.ಎಸ್ಸಿ., ಡಿಪ್ಲೋಮಾ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಪ್ರಸ್ತಾವನೆಯನ್ನು ಕೂಡಲೇ ‘ವ್ಯವಸ್ಥಾಪಕರು, ಪ್ರಧಾನಮಂತ್ರಿ ಕೌಶಲ್ಯ ಕೇಂದ್ರ, ವಿಶ್ವೋತ್ತಮ ಕಾಂಪ್ಲೆಕ್ಸ್, ಬಾಲರಾಜ ಅರಸ್ ರಸ್ತೆ, ಕೆ.ಇ.ಬಿ.ಸರ್ಕಲ್, ಶಿವಮೊಗ್ಗ ವಿಳಾಸಕ್ಕೆ ಸಲ್ಲಿಸುವಂತೆ ತರಬೇತಿ ಕೇಂದ್ರದ ವ್ಯವಸ್ಥಾಪಕ ಧ್ರುವಕುಮಾರ್ ಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಚೆ ಇಲಾಖೆ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಂಚೆ ಇಲಾಖೆಯು ರಾಜ್ಯದ ವಿವಿಧ ಅಂಚೆ ಘಟಕಗಳು, ಕಚೇರಿಗಳು, ವಿಭಾಗಗಳಿಗೆ ಅನುಗುಣವಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.
ಜೂನಿಯರ್ ಅಕೌಂಟೆಂಟ್-02, ಪೋಸ್ಟಲ್ ಅಸಿಸ್ಟೆಂಟ್-11, ವಿಂಗಡಣೆ ಸಹಾಯಕ-04, ಪೋಸ್ಟ ಮನ್ -27 ಹುದ್ದೆಗಳಿದ್ದು, ಅಭ್ಯರ್ಥಿಗಳು ಹುದ್ದೆಗೆ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿದವರಾಗಿದ್ದು, ಕನ್ನಡ ಭಾಷೆ ಓದು ಮತ್ತು ಬರಹ ಬಲ್ಲವರಾಗಿರಬೇಕು. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200/-, ಮಹಿಳಾ ಮತ್ತು ಇತರೆ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ಯಾವುದೇ ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರು ಇಲಾಖೆಯ ಜಾಲತಾಣ www.karnatakapost.gov.in ನ್ನು ಸಂಪರ್ಕಿಸಿ ಮಾಹಿತಿ ಹಾಗೂ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಸಕ್ಷಮ ಅಧಿಕಾರಿಗಳಿಂದ ದೃಢೀಕರಿಸಿದ ದಾಖಲೆಗಳೊಂದಿಗೆ ಫೆಬ್ರವರಿ 26ರೊಳಗಾಗಿ ‘ದಿ ಅಸಿಸ್ಟೆಂಟ್ ಡೈರೆಕ್ಟರ್, ಔ/o ಚೀಫ್ ಪೋಸ್ಟ್ ಮಾಸ್ಟರ್ ಜನರಲ್, ಕರ್ನಾಟಕ ಸರ್ಕಲ್, ಬೆಂಗಳೂರು-01ವಿಳಾಸಕ್ಕೆ ನೋಂದಾಯಿತ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬೇಕು. ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸುವಂತೆ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಕಂದಾಯ ಘಟಕದಲ್ಲಿ ಗ್ರಾಮಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ
ಕಂದಾಯ ಇಲಾಖೆಯಲ್ಲಿ ಪದೋನ್ನತಿಯಿಂದ, ವಯೋ ನಿವೃತ್ತಿಯಿಂದ ಖಾಲಿಯಾಗಿರುವ 69 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಸಾಮಾನ್ಯ ಸೇವೆಗಳು ನಿಯಮದಡಿ ಭರ್ತಿ ಮಾಡಲು ಉದ್ದೇಶಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಯು ದ್ವಿತೀಯ ಪಿ.ಯು.ಸಿ.ಯಲ್ಲಿ ಉತ್ತೀರ್ಣರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿದವರಾಗಿರಬೇಕು. ಅಭ್ಯರ್ಥಿಯು ಕನಿಷ್ಟ 18ವರ್ಷ ವಯೋಮಿತಿ ಮೀರಿದವರಾಗಿದ್ದು ಪರಿಶಿಷ್ಟರು ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳು 40ವರ್ಷ, 2ಎ, ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 38ವರ್ಷ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳು 35ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳು ರೂ.100/- ಹಾಗೂ ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ರೂ.200/- ಅರ್ಜಿ ಶುಲ್ಕ ಪಾವತಿಸಿ, ತಮ್ಮ ಪ್ರಸ್ತಾವನೆಯನ್ನು http://shivamogga-va.kar.nic.in ಮೂಲಕ ಫೆಬ್ರವರಿ 15ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಕಂದಾಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.