ಶಿವಮೊಗ್ಗ:- ರಾಜ್ಯದ ಹಿಂದುಳಿದ ವರ್ಗಗಳ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಿದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರತಿಷ್ಠಾಪಿಸಿರುವ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಜಾತ್ಯಾತೀತ ಆಶಯಗಳನ್ನು ಅಳವಡಿಸಿಕೊಂಡು ಅದಕ್ಕೆ ಬದ್ಧರಾಗಿ ದುಡಿದಿರುವ ವಿ. ರಾಜು ಇವರಿಗೆ ಈ ಬಾರಿಯ ಡಿ. ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕುವೆಂಪು ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಜಾತಿ ಒಕ್ಕೂಟದ ಅಧ್ಯಕ್ಷರಾದ ವಿ.ರಾಜು ರವರಿಗೆ ಜಿಲ್ಲಾಡಳಿತ ಪ್ರಶಸ್ತಿ ನೀಡಿ ಗೌರವಿಸಿತು.
ವಿ.ರಾಜು ರವರು ಶಿವಮೊಗ್ಗ ನಗರದಲ್ಲಿ 1958ರ ಜೂ.1 ರಂದು ಜನಿಸಿದ್ದು, ಡಿವಿಎಸ್ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದಿದ್ದಾರೆ 1977ರಿಂದಲೂ ಸಾರ್ವಜನಿಕ ಕ್ಷೇತ್ರದಲ್ಲಿ ಸಾಮಾಜಿಕ ಸೇವಾ ಕಾರ್ಯಕರ್ತರಾಗಿ 1982ರಲ್ಲಿ ದೇವರಾಜ ಅರಸು ನೇತೃತ್ವದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಡಿ. ದೇವರಾಜ ಅರಸುರವರ ಧ್ಯೇಯೋದ್ದೇಶಗಳು ಹಾಗೂ ಅವರ ಯೋಜನೆಗಳನ್ನು ಜಾರಿಗೆ ತರುವಲ್ಲಿ ಜಿಲ್ಲೆಯಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬಹುಮತ ಸಂಘಟನೆ ಮೂಲಕ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ, ಸತ್ಯಾಗ್ರಹ ನಡೆಸಿರುತ್ತಾರೆ. 2013ರಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟ ಸ್ಥಾಪಿಸಿದ್ದಾರೆ. ಸಹಕಾರ ಕ್ಷೇತ್ರದ ಇವರ ಸೇವೆಗೆ ಸರ್ಕಾರ 2021-22ರಲ್ಲಿ ಸಹಕಾರ ರತ್ನ ಪ್ರಶಸ್ತಿ ನೀಡಿದೆ.
ಪ್ರಸ್ತುತ ಶೋಷಿತರ ಸಮಗ್ರ ಅಭಿವೃದ್ಧಿ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗೆ ತೊಡಗಿಸಿಕೊಂಡಿರುವ ವಿ. ರಾಜುರವರಿಗೆ ಡಿ. ದೇವರಾಜ ಅರಸು ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

error: Content is protected !!