
ಶಿವಮೊಗ್ಗ ನವೆಂಬರ್ 25 : ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು.
ಘಟಿಕೋತ್ಸವದಲ್ಲಿ ಹೆಸರಾಂತ ಅಣು ಜೀವಶಾಸ್ತ್ರಜ್ಞ ಭಾರತೀಯ ಸಂಜಾತ ವಿಜ್ಞಾನಿ ಡಾ.ಕೃಷ್ಣಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ನಂತರ ವಿವಿಧ ಶಿಕ್ಷಣ ವಿಭಾಗದಲ್ಲಿ 28 ವಿದ್ಯಾರ್ಥಿಗಳಿಗೆ 35 ಚಿನ್ನದ ಪದಕ ಹಾಗೂ 15 ವಿದ್ಯಾರ್ಥಿಗಳಿಗೆ ಪಿಎಚ್ಡಿ ಪದವಿ ಪ್ರದಾನ ಮಾಡಲಾಯಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಉಪ ಮಹಾನಿರ್ದೇಶಕರಾದ ಡಾ.ಆರ್.ಸಿ. ಅಗ್ರವಾಲ್ ಘಟಿಕೋತ್ಸವದ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಕುಲಪತಿಗಳಾದ ಡಾ. ಎಂ. ಕೆ. ನಾಯ್ಕ್, ಕುಲಸಚಿವರುಗಳಾದ ಡಾ. ಆರ್ ಲೋಕೇಶ್ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.