ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಘದ ವತಿಯಿಂದ ಗಾಜನೂರು ಇಲ್ಲಿ ಬಹುನಿರೀಕ್ಷಿತ ಹಾಘೂ ವಿದ್ಯಾವಂತ ನಿರುದ್ಯೋಗಿಗಳಿಗೆ ಸ್ವಂತ ಉದ್ಯೋಗ ಸೃಷ್ಟಿ ಮಾಡಿಕೊಳ್ಳುವ ಹಾಗೂ ನಿರುದ್ಯೋಗ ಸಮಸ್ಯೆ ಆದಷ್ಟು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಅತಿ ಮುಖ್ಯ ಯೋಜನೆಗಳೊಂದಾದ “ಕೌಶಲ್ಯಾಭಿವೃದ್ಧಿ ಕೇಂದ್ರ” ಸ್ಥಾಪಿಸಲು ಸ್ಥಳ ಮಂಜೂರು ಮಾಡಲು ಮಾನ್ಯ ಜಿಲ್ಲಾಧಿಕಾರಿಗಳಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಘದ ವತಿಯಿಂದ ಇಂದು ಬೆಳಿಗ್ಗೆ ಮನವಿ ಸಲ್ಲಿಸಲಾಯಿತು. ಈಗಾಗಲೇ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸಲು ಜಿಲ್ಲ್ಲಾಡಳಿತ ಅನುಮತಿ ಮೇರೆಗೆ ಸ್ಥಳ ಪರಿಶೀಲಿಸಿ, ಸಂಪೂರ್ಣ ನೀಲಿನಕ್ಷೆ, ಯೋಜನಾ ವರದಿ ತಯಾರಿಸಿ ಮನವಿ ಸಲ್ಲಿಸಲಾಗಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಜೆ.ಆರ್.ವಾಸುದೇವ್ ತಿಳಿಸಿದರು. ಈ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳಾದ ದಯಾನಂದ್ರವರು ಮಾತನಾಡಿ ಈ ಯೋಜನೆ ಶಿವಮೊಗ್ಗ ಜಿಲ್ಲೆ ಅತ್ಯಂತ ತುರ್ತಾಗಿ ಆಗಬೇಕಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜೆ.ಆರ್.ವಾಸುದೇವ್, ಕಾರ್ಯದರ್ಶಿಗಳಾದ ಬಿ.ಆರ್.ಸಂತೋಷ್, ಬಿ.ಗೋಪಿನಾತ್, ಉಪಾಧ್ಯಕ್ಷರಾದ ಪಿ.ರುದ್ರೇಶ್, ಕೌಶಲ್ಯಾಭಿವೃದ್ಧಿ ಛೇರ್ಮನ್, ಡಿ.ಪಿ. ಸಂದೀಪ್, ಎನ್.ಗೋಪಿನಾಥ್, ಸಾರ್ವಜನಿಕ ಸಂಪರ್ಕಾಧಿಕಾರಿ ಜಿ.ವಿಜಯಕುಮಾರ್, ಮಾಜಿ ಅಧ್ಯಕ್ಷರಾದ ಎಂ.ಭಾರದ್ವಾಜ್, ಟಿ.ಆರ್.ಅಶ್ವತನಾರಾಯಣ ಶೆಟ್ಟಿ ಹಾಗೂ ಪದಾಧಿಕಾರಿಗಳು ಹಾಜರಿದ್ದರು.