ಶಿವಮೊಗ್ಗ ಅಕ್ಟೋಬರ್ 18:  ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಚುನಾವಣೆ ನಡೆಸಲು ದಿನಾಂಕ: 28/10/2022 ರಂದು ಮಧ್ಯಾಹ್ನ 3.00ಕ್ಕೆ ಪಾಲಿಕೆ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಪಾಲಿಕೆ ಚುನಾವಣಾ ಸಭೆಯನ್ನು ಕರೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅಂದು ಬೆಳಗ್ಗೆ 12.00 ರಿಂದ ಮಧ್ಯಾಹ್ನ 1.00ರವರೆಗೆ ನಾಮಪತ್ರಗಳನ್ನು ಸ್ವೀಕರಿಸುವುದು, ಮಧ್ಯಾಹ್ನ 3.00ರ ನಂತರ ನಾಮಪತ್ರ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ ಹಾಗೂ ಸದಸ್ಯರ ಸಹಿ ದಾಖಲಿಸುವುದು ಮತ್ತು ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಿಸಲಾಗುವುದು. ಮಹಾಪೌರರ ಸ್ಥಾನಕ್ಕೆ ಪರಿಶಿಷ್ಟ ಜಾತಿ ಹಾಗೂ ಉಪ ಮಹಾಪೌರರ ಸ್ಥಾನಕ್ಕೆ ಹಿಂದುಳಿದ ‘ಅ’ ವರ್ಗದ ಮಹಿಳೆಗೆ ಮೀಸಲಾತಿ ನೀಡಲಾಗಿದೆ.

error: Content is protected !!