ಶಿವಮೊಗ್ಗ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಕುವೆಂಪು ರಂಗ ಮಂದಿರ, ಶಿವಮೊಗ್ಗದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಉದ್ಘಾಟನೆಯನ್ನು ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀ ಕೆ.ಬಿ. ಶಿವಕುಮಾರ್ ರವರು ದೀಪ ಬೆಳಗಿಸಿ, ನೆರವೇರಿಸುವುದರ ಮೂಲಕ ಸಮುದಾಯದ ಬಾಂಧವರಿಗೆ ಶುಭ ಕೋರಿದರು. ಸಂಘದ ಜಿಲ್ಲಾಧ್ಯಕ್ಷರಾದ ಶ್ರೀ ಹನುಮಂತಪ್ಪ, ತಾಲ್ಲೂಕು ಅಧ್ಯಕ್ಷರಾದ ಶ್ರೀ ವೀರಭದ್ರಪ್ಪ, ಗೌರವಾಧ್ಯಕ್ಷರಾದ ಶ್ರೀ ಮಲ್ಲೇಶಪ್ಪ, ಕಾರ್ಯದರ್ಶಿಗಳಾದ ಶ್ರೀ ವೀರೇಶ್, ನಿರ್ದೇಶಕರಾದ ಶ್ರೀ ಹೇಗರಾಜು, ಶ್ರೀ ತೀರ್ಥಪ್ಪ ಹಾಗೂ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.