ಶಿವಮೊಗ್ಗ, ನವಂಬರ್ 07: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ರಾಜ್ಯೋತ್ಸವದ ಅಂಗವಾಗಿ 2020ರ ನವೆಂಬರ್ ಮಾಹೆಯಾದ್ಯಂತ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ಉದ್ದೇಶಿಸಿದೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ಲಭ್ಯವಾಗಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್‍ನಲ್ಲಿಯೂ ಕೂಡ ಶೇ.50 ರಿಯಾಯಿತಿ ದೊರೆಯಲಿದೆ.
ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಕೂಡ ಶೇ.50ರ ರಿಯಾಯಿತಿಯಲ್ಲಿ ದಲ್ಲಿ ನಮ್ಮ ಪುಸ್ತಕಗಳು ವಿಭಾಗದಲಿ ಆಯ್ಕೆ ಮಾಡಿ ಆನ್‍ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ.
ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿಲ ಸಾಹಿತ್ಯ ಕೃತಿಗಳನ್ನು ಸುಮಾರು 360ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂದ ಉದ್ದೇಶದಿಂದ ಪುಸ್ತಕಗಳನ್ನು ಮಾರಾಟ ಮಾಡಲಾಗುತ್ತಿದ್ದು, ಆಸಕ್ತರು ಈ ಸದವಕಾಶದ ಲಾಭ ಪಡೆದುಕೊಳ್ಳುವಂತೆ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್‍ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.