ಶಿವಮೊಗ್ಗ, ಮಾರ್ಚ್ 05 : ಶಿವಮೊಗ್ಗ ಮಹಾನಗರಪಾಲಿಕೆ ಆವರಣದಲ್ಲಿ ಇಂದು ಸುಶಾಸನ ಭವನ ನಿರ್ಮಾಣ ಹಾಗೂ ಮಹಾತ್ಮಗಾಂಧಿ ನಗರ ವಿಕಾಸ ಯೋಜನಾ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪರವರು ನೆರವೇರಿಸಿದರು. ಈ ವೇಳೆ ಮಹಾನಗರಪಾಲಿಕೆ ಮಹಾಪೌರರಾದ ಸುನೀತಾ ಎಸ್.ಅಣ್ಣಪ್ಪ, ಉಪ ಮಹಾಪೌರರಾದ ಕೆ.ಶಂಕರ್, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರಾದ ಸುವರ್ಣ ಶಂಕರ್, ರೇಖಾ ರಂಗನಾಥ್, ಹೆಚ್.ಸಿ.ಯೋಗಿಶ್, ಇತರೆ ಸದಸ್ಯರು, ಪಾಲಿಕೆ ಆಯುಕ್ತ ಕೆ.ಮಾಯಣ್ಣ ಗೌಡ, ಇತರರು ಹಾಜರಿದ್ದರು.