
ಶಿವಮೊಗ್ಗ, ಏಪ್ರಿಲ್ 15 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳು ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 16ರಂದು ಬೆಳಿಗ್ಗೆ 10ಗಂಟೆಗೆ ನಗರದ ಬಿ.ಹೆಚ್.ರಸ್ತೆಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಸಮುದಾಯ ಆಧಾರಿತ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ತಜ್ಞ ಸಂಪನ್ಮೂಲ ವ್ಯಕ್ತಿಗಳು ಆಗಮಿಸಲಿರುವರು.

ಏಪ್ರಿಲ್ 16ರಿಂದ 30ರವರೆಗಿನ ಅವಧಿಯಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆಮನೆ ಭೇಟಿ ನೀಡಿ, 1-19ವರ್ಷದ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ಉಚಿತವಾಗಿ ನೀಡುವರು.