
ಶಿವಮೊಗ್ಗ ಡಿಸೆಂಬರ್ 22 : ಡಿಸೆಂಬರ್ 21 ರಂದು ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ ಪ್ರಸಿದ್ದ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ಹೆಚ್.ಆರ್.ಕೇಶವಮೂರ್ತಿ(88) ಇವರ ಅಂತ್ಯಕ್ರಿಯೆಯು ಇಂದು ಹೊಸಹಳ್ಳಿಯಲ್ಲಿ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಮೃತರ ಗೌರವಾರ್ಥ ಸರ್ಕಾರ, ಸರ್ಕಾರಿ ಗೌರವದೊಂದಿಗೆ ಅಂತಿಮ ಕ್ರಿಯೆ ನಡೆಸಲು ಆದೇಶಿಸಿರುವನ್ವಯ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಮಹಾನಗರಪಾಲಿಕೆ ಮಹಾಪೌರ ಶಿವಕುಮಾರ್ ಸೇರಿದಂತೆ ಇತರೆ ಗಣ್ಯರು ಪಾರ್ಥೀವ ಶರೀರಕ್ಕೆ ಪುಷ್ಪಮಾಲೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು. ನಂತರ ಶಿಷ್ಟಾಚಾರದಂತೆ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಈ ವೇಳೆ ಮೃತರ ಪತ್ನಿ, ಪುತ್ರಿ, ಬಂಧುಗಳು, ವಿಪ್ರ ಸಮಾಜದ ಮುಖಂಡರು, ಸಾರ್ವಜನಿಕರು, ಜನಪ್ರತಿನಿಧಿಗಳು, ಅಧಿಕಾರಿಗಳು, ಪಾಲ್ಗೊಂಡಿದ್ದರು.
(ಫೋಟೊ ಇದೆ)