ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ ಇತ್ಯಾದಿಗಳ ಅಧಿಕಾರಿ/ನೌಕರರು ಬಿ.ಪಿ.ಎಲ್ ಪಡಿತರ ಚೀಟಿಯನ್ನು ಪಡೆದು ಉಪಯೋಗಿಸುತ್ತಿರುವ ಬಗ್ಗೆ ಸರ್ಕಾರಕ್ಕೆ ದೂರುಗಳು ಬಂದಿರುವ ಹಿನ್ನಲೆಯಲ್ಲಿ, ಬಿ.ಪಿ.ಎಲ್ ಪಡಿತರ ಚೀಟಿಗಳನ್ನು ಹೊಂದಿರುವ ನೌಕರರು ಅಥವಾ ನೌಕರರ ಅವಲಂಬಿತರು ಜುಲೈ 10 ರೊಳಗಾಗಿ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಹಿಂತಿರುಗಿಸಿ ರದ್ದುಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿರುತ್ತಾರೆ.
ಬಿ.ಪಿ.ಎಲ್ ಪಡಿತರ ಚೀಟಿಯ ಸೌಲಭ್ಯವು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡಿರುವುದಾಗಿದ್ದು, ಸರ್ಕಾರದಿಂದ ವೇತನ ಭತ್ಯೆಗಳನ್ನು ಪಡೆಯುವ ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ ಇತ್ಯಾದಿಗಳ ಅಧಿಕಾರಿ/ನೌಕರರು ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧವಾಗಿರುತ್ತದೆ.
ನಿಗಧಿತ ದಿನಾಂಕಗಳೊಳಗೆ ಬಿ.ಪಿ.ಎಲ್ ಪಡಿತರ ಚೀಟಿಯನ್ನು ರದ್ದುಪಡಿಸಿಕೊಳ್ಳದಿದ್ದಲ್ಲಿ ಅಂತಹ ಅಧಿಕಾರಿ/ನೌಕರರ ವಿರುದ್ಧ ಶಿಸ್ತು ಕ್ರಮ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದಲ್ಲದೇ ಅವರಿಂದ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ವಸೂಲು ಮಾಡಲು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿರುತ್ತಾರೆ.

error: Content is protected !!