ಸಂಘಟಿತರಾಗಿ ಸಮಾಜಮುಖಿ ಕೆಲಸ ಮಾಡೋಣ

ಶಿವಮೊಗ್ಗ : ಸಮಾಜ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಮ್ಮ ಕೊಡುಗೆ ಏನು ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಮೂಲಕ ಸಮಾಜದ ಒಳಿತಿಗಾಗಿ ಎಲ್ಲರೂ ಸಂಘಟಿತರಾಗಿ ಶ್ರಮಿಸೋಣ ಎಂದು ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್‌ ಟ್ರಸ್ಟಿ ಡಾ. ಧನಂಜಯ್‌ ಸರ್ಜಿ ಹೇಳಿದರು.

ನಗರದ ನ್ಯೂ ಮಂಡ್ಲಿಯಲ್ಲಿ ಪುನೀತ್‌ ರಾಜಕುಮಾರ್‌ ಒಂದನೇ ವರ್ಷದ ಸ್ಮರಣಾರ್ಥ ಕರ್ನಾಟಕ ನಾಡು ರಕ್ಷಣಾ ವೇದಿಕೆ, ಸರ್ಜಿ ಆಸ್ಪತ್ರೆಗಳ ಸಮೂಹ ಸಂಸ್ಥೆ ,ಸರ್ಜಿ ಫೌಂಡೇಶನ್‌ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಶಂಕರ್‌ ಕಣ್ಣಿನ ಹಾಸ್ಪಿಟಲ್‌ ವತಿಯಿಂದ ಹಮ್ಮಿಕೊಂಡಿದ್ದ ನೇತ್ರದಾನ ಹಾಗೂ ಕನ್ನಡ ಧ್ವಜಾರೋಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾನಾಡಿದರು.

ಪುನೀತ್‌ ರಾಜಕುಮಾರ್‌ ಅವರು ನಾಡಿನ ಏಳು ಕೋಟಿ ಕನ್ನಡಗರ ಆರಾಧ್ಯರಾಗಿದ್ದಾರೆ. ಅವರ ಆದರ್ಶಗಳನ್ನು ಎಲ್ಲರೂ ಪಾಲನೆ ಮಾಡೋಣ ಎಂದು ಹೇಳಿದರು.

ಇಂದೇ ಸಂದರ್ಭ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ಮಹಾನಗರ ಪಾಲಿಕೆಯ ಉಪ ಮೇಯರ್‌ ಲಕ್ಷ್ಮಿ ಶಂಕರ್‌ ನಾಯಕ್‌, ಕರ್ನಾಟಕ ನಾಡು ರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಪ್ರಸನ್ನ ಗೌಡ್ರು ಮತ್ತು ಜಿಲ್ಲಾಧ್ಯಕ್ಷರಾದ ದಿನೇಶ ಎಸ್‌ ಎಂ ಜಿಲ್ಲಾ ಉಪಾಧ್ಯಕ್ಷ ಕುಬೇರ್‌ , ಜಿಲ್ಲಾ ಕಾರ್ಯದರ್ಶಿ ದಾಮೋದರ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಕೇತ್‌ ,ನಗರ ಅಧ್ಯಕ್ಷ ಮಂಜುನಾಥ್‌, ಉಪಾಧ್ಯಕ್ಷ ಮಂಜುನಾಥ್‌, ಎಸ್‌ ಬಸವರಾಜ, ಮಂಜುನಾಥ, ಸಮೀವುಲ್ಲಾ, ಕಾಂತರಾಜ ಸಚಿನ್‌ ಮತ್ತು ತೀರ್ಥಳ್ಳಿಯ ತಾಲೂಕು ಅಧ್ಯಕ್ಷ ಶಮಂತ್‌, ಘಟಕದ ಪದಾಧಿಕಾರಿಗಳು ಜೊತೆಗೆ ಹಾಜರಿದ್ದರು.
250 ಕ್ಕೂ ಹೆಚ್ಚು ಮಂದಿ ಆರೋಗ್ಯ ತಪಾಸಣೆ : ಸರ್ಜಿ ಫೌಂಡೇಶನ್‌ ಶಿವಮೊಗ್ಗ, ಸರ್ಜಿ ಆಸ್ಪತ್ರೆಗಳ ಸಮೂಹಂದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 250 ಕ್ಕೂ ಹೆಚ್ಚು ಮಂದಿಯ ಆರೋಗ್ಯ ತಪಾಸಣೆ ನಡೆಸಿ, ಔಷಧಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಕ್ಕಳ ತಜ್ಞರಾದ ಡಾ. ಧನಂಜಯ ಸರ್ಜಿ ಅವರು ಮತ್ತು ಸರ್ಜಿ ಆಸ್ಪತ್ರೆಯ ಮೂಳೆ ರೋಗ ತಜ್ಞರು, ಸ್ತ್ರೀರೋಗ ತಜ್ಞರು, ಮಕ್ಕಳ ತಜ್ಞರು , ಜನರಲ್‌ ಪಿಜಿಷಿಯನ್‌ ಆರೋಗ್ಯ ತಪಾಸಣೆ ನಡೆಸಿದರು.

ಶಿವಮೊಗ್ಗದ ನ್ಯೂ ಮಂಡ್ಲಿಯಲ್ಲಿ ಪುನೀತ್‌ ರಾಜಕುಮಾರ್‌ ಒಂದನೇ ವರ್ಷದ ಸ್ಮರಣಾರ್ಥ ಕರ್ನಾಟಕ ನಾಡು ರಕ್ಷಣಾ ವೇದಿಕೆ, ಸರ್ಜಿ ಆಸ್ಪತ್ರೆಗಳ ಸಮೂಹ ಸಂಸ್ಥೆ , ಸರ್ಜಿ ಫೌಂಡೇಶನ್‌ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ಶಂಕರ್‌ ಕಣ್ಣಿನ ಹಾಸ್ಪಿಟಲ್‌ ವತಿಯಿಂದ ಹಮ್ಮಿಕೊಂಡಿದ್ದ ನೇತ್ರದಾನ ಹಾಗೂ ಕನ್ನಡ ಧ್ವಜಾರೋಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

error: Content is protected !!