ಕನ್ನಡ ಕಟ್ಟುವ ಕೆಲಸ ಎಲ್ಲರಿಂದ ನಡೆಯಲಿ : ಡಾ.ಶ್ರೀಬಸವ ಮರುಳಸಿದ್ಧ ಸ್ವಾಮೀಜಿ
ಶಿವಮೊಗ್ಗ : ನಿತ್ಯ ಜೀವನದಲ್ಲಿ ಪ್ರಜ್ಞಾಪೂರ್ವಕವಾಗಿ ಬಳಕೆ ಮಾಡುವ ಮೂಲಕ ಕನ್ನಡವನ್ನು ಜೀವಂತವಾಗಿಡುವ ಕಾಯಕವನ್ನು ನಾವೆಲ್ಲರೂ ಸೇರಿ ಮಾಡಬೇಕು ಎಂದು ಬಸವ ಕೇಂದ್ರದ ಡಾ.ಶ್ರೀಬಸವ ಮರುಳಸಿದ್ಧ ಸ್ವಾಮೀಜಿ ಹೇಳಿದರು.
ಕನ್ನಡ ರಾಜ್ಯೋತ್ಸವ ಅಂಗವಾಗಿ ಸರ್ಜಿ ಫೌಂಡೇಶನ್, ಸರ್ಜಿ ಆಸ್ಪತ್ರೆಗಳ ಸಮೂಹ ಹಾಗೂ ಗೋಪಾಲಗೌಡ ಬಡಾವಣೆಯ ಆರ್ಶಿರಾಜ್ ಬಿಲ್ಡರ್ಸ್ ಆ್ಯಂಡ್ ಡೆವಲಪರ್‌ರಸ ಪ್ರೈವೇಟ್ ಕಂಪನಿ ಲಿಮಿಟೆಡ್ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ, ಎಲ್ಲರೂ ಒಂದಾಗಿ ಕನ್ನಡವನ್ನು ಕಟ್ಟುವ ಕೆಲಸ ಮಾಡಬೇಕು ಎಂದರು.
ಡಾ.ಧನಂಜಯ ಸರ್ಜಿ ಅವರು ವೈದ್ಯ ವೃತ್ತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಇನ್ನು ಹೆಚ್ಚು ಸೇವೆ ಮಾಡುವ ಸೌಭಾಗ್ಯ ಅವರದಾಗಲಿ ಎಂದ ಅವರು, ಆರ್ಶಿರಾಜ್ ಕಂಪನಿ ರಾಜ್ಯೋತ್ಸವ ಮೂಲಕ ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಹೇಳಿದರು.
ಸರ್ಜಿ ಫೌಂಡೇಶನ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಧನಂಜಯ ಸರ್ಜಿ, ಆರ್ಶಿರಾಜ್ ಬಿಲ್ಡರ್ಸ್ ಆ್ಯಂಡ್ ಡೆವಲಪರ್‌ರಸ ಪ್ರೈವೇಟ್ ಕಂಪನಿ ಲಿಮಿಟೆಡ್‌ನ ಚೇರ್ಮನ್ ಅಕ್ಬರ್ ಖಾನ್, ಮ್ಯಾನೇಜಿಂಗ್ ಡೈರೆಕ್ಟರ್ ಇರ್ಫಾನ್‌ಖಾನ್, ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ಮತ್ತಿತರರು ಭಾಗವಹಿಸಿದ್ದರು.
ಆರೋಗ್ಯ ತಪಾಸಣೆ : ಉಚಿತ ಆರೋಗ್ಯ ತಪಾಸಣೆಗೆ ಒಂದು ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯಕ್ರಮಕ್ಕೂ ಮೊದಲೇ ಹೆಸರು ನೋಂದಾಯಿಸಿಕೊಂಡಿದ್ದರು. ಸಕ್ಕರೆಕಾಯಿಲೆ, ರಕ್ತದೊತ್ತಡ ಪರೀಕ್ಷೆ ನಡೆಸಲಾಯಿತು. ಪಿಜಿಷಿಯನ್, ಮಕ್ಕಳ ರೋಗ ತಜ್ಞರು, ಸ್ತ್ರೀರೋಗ ತಜ್ಞರು ಹಾಗೂ ಮೂಳೆ ರೋಗ ತಜ್ಞರು ಸೇರಿದಂತೆ ಒಟ್ಟು ಏಳು ವೈದ್ಯರು ತಪಾಸಣೆ ನಡೆಸಿ, ಸಲಹೆ, ಸೂಚನೆ ಕೊಟ್ಟು ಔಷಧಿ ವಿತರಿಸಿದರು. ಮಕ್ಕಳು, ಮಹಿಳೆಯರು, ಪುರುಷರು ಹಾಗೂ ವೃದ್ಧರು ಸೇರಿದಂತೆ ಐದು ನೂರಕ್ಕೂ ಆರುನೂರಕ್ಕೂ ಹೆಚ್ಚು ಮಂದಿಗೆ ತಪಾಸಣೆ ನಡೆಸಿ ಔಷಧಿ ವಿತರಿಸಲಾಯಿತು. 50 ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು.
ಶಿವಮೊಗ್ಗ ರಂಗನಾಥ ಬಡಾವಣೆಯಲ್ಲಿ ರಾಜ್ಯೋತ್ಸವ ಶನಿವಾರ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಬಸವ ಕೇಂದ್ರದ ಡಾ.ಶ್ರೀಬಸವ ಮರುಳಸಿದ್ಧ ಸ್ವಾಮೀಜಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಸರ್ಜಿ ಫೌಂಡೇಶನ್‌ನ ಮ್ಯಾನೇಜಿಂಗ್ ಟ್ರಸ್ಟಿ ಡಾ.ಧನಂಜಯ ಸರ್ಜಿ, ಆರ್ಶಿರಾಜ್ ಬಿಲ್ಡರ್ಸ್ ಆ್ಯಂಡ್ ಡೆವಲಪರ್ಸ್ ಪ್ರೈವೇಟ್ ಕಂಪನಿ ಲಿಮಿಟೆಡ್‌ನ ಚೇರ್ಮನ್ ಅಕ್ಬರ್ ಖಾನ್, ಮ್ಯಾನೇಜಿಂಗ್ ಡೈರೆಕ್ಟರ್ ಇರ್ಫಾನ್‌ಖಾನ್, ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್ ಮತ್ತಿತರರು ಭಾಗವಹಿಸಿದ್ದರು.