ಶಿವಮೊಗ್ಗ ನವೆಂಬರ್ 03 : ಶಿವಮೊಗ್ಗ ತಾಲೂಕು ತೋಟಗಾರಿಕೆ ಇಲಾಖೆಯು 2022-23 ನೇ ಸಾಲಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕ ಅಳವಡಿಸಲು ಸಹಾಯಧನ ಸೌಲಭ್ಯವನ್ನು ಪಡೆಯಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಸಾಮಾನ್ಯ ವರ್ಗಕ್ಕೆ ಗರಿಷ್ಟ 2 ಹೆಕ್ಟರ್ ಪ್ರದೇಶಕ್ಕೆ ಶೇ 75 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ 90 ಸಹಾಯಧನವನ್ನು ನೀಡಲಾಗುವುದು.
ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ದಿ: 19/11/2022 ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ತಮ್ಮ ಹೋಬಳಿ ವ್ಯಾಪ್ತಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ತಾಲೂಕು ತೋಟಗಾರಿಕೆ ಕಚೇರಿಯನ್ನು ಅಥವಾ ದೂ.ಸಂ.: 08182-295415 ನ್ನು ಸಂಪರ್ಕಿಸುವುದು.

error: Content is protected !!