ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯಲ್ಲಿ 26-09-2023 ರಿಂದ 25-10-2023 ವರೆಗೆ 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದೆ. 3 ತಿಂಗಳ ಮೇಲ್ಪಟ್ಟ ಎಲ್ಲ ದನ, ಎಮ್ಮೆ ಮತ್ತು ಕರುಗಳಿಗೆ ಲಸಿಕೆ ನೀಡಲಾಗುತ್ತಿದೆ.
ರೈತರಿಗೆ ಆರ್ಥಿಕ ಸಂಕಷ್ಟ ತಂದೊಡ್ಡುವ ಕಾಲುಬಾಯಿ ರೋಗ ನಿಯಂತ್ರಿಸಿ, ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ರೋಗದ ವಿರುದ್ದ ಲಸಿಕೆ ಹಾಕಿಸುವುದು ಕಡ್ಡಾಯವಾಗಿರುತ್ತದೆ. ಲಸಿಕೆದಾರರು ನಿಮ್ಮ ಗ್ರಾಮಕ್ಕೆ, ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾದ ಕಾಲುಬಾಯಿ ರೋಗವನ್ನು ತಡೆಯಲು ದನ, ಎಮ್ಮೆ ಮತ್ತು ಕರುಗಳಿಗೆ ಕಡ್ಡಾಯವಾಗಿ ಕಾಲುಬಾಯಿ ರೋಗ ಲಸಿಕೆ ಹಾಕಿಸಬೇಕು. ಹೆಚ್ಚಿನ ಮಾಹಿತಿಗೆ ಸಮೀಪದ ಪಶುಪಾಲನಾ ಸಮೀಪ ಇಲಾಖೆ ಸಂಪರ್ಕಿಸಬಹುದಾಗಿದೆ.
ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಶಿವಮೊಗ್ಗ ಜಿಲ್ಲೆಯಲ್ಲಿ 26-09-2023 ರಿಂದ 25-10-2023 ವರೆಗೆ 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 1586 ಗ್ರಾಮಗಳಿದ್ದು, 4ನೇ ಸುತ್ತಿನ ಲಸಿಕಾ ಕಾರ್ಯಕ್ರಮಕ್ಕೆ 639250 ಡೋಸ್ ಲಸಿಕೆ ನೀಡಲಾಗಿದೆ. ಒಟ್ಟು 653573 ಸಿರಿಂಜ್ಗಳು ಲಭ್ಯವಿದೆ. 3 ತಿಂಗಳ ಮೇಲ್ಪಟ್ಟ ಎಲ್ಲ ದನ, ಎಮ್ಮೆ ಮತ್ತು ಕರುಗಳಿಗೆ ಲಸಿಕೆ ಹಾಕಿಸಬೇಕು ಎಂದು ಪಶುಪಾಲನಾ ಮತ್ತು ಪಶುಸೇವಾ ಇಲಾಖೆಯ ಉಪನಿರ್ದೇಶಕ ಡಾ. ಶಿವಯೋಗಿ ಎ ಲಿತಿಳಿಸಿದ್ದಾರೆ.

error: Content is protected !!