News Next

ಶಿವಮೊಗ್ಗ, ಆಗಸ್ಟ್ 05: ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ವಿಹಂಗಮ ನರ್ಸರಿ ತಿರುವಿನಿಂದ ಭಾರತಿಪುರ ತಿರುವಿನವರೆಗೆ ರಸ್ತೆ ಕುಸಿದಿರುವುದರಿಂದ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಪರ್ಯಾಯ ಮಾರ್ಗಗಳಲ್ಲಿ ಸಂಚಾರಕ್ಕೆ ಈ ಕೆಳಗಿನಂತೆ ಮಾರ್ಪಡಿಸಿ ಜಿಲ್ಲಾಧಿಕಾರಿಗಳು ತಾತ್ಕಾಲಿಕ ಆದೇಶ ಹೊರಡಿಸಿದ್ದಾರೆ.
ಕ್ರ.ಸಂ ವಾಹನ ಸಂಚಾರಕ್ಕಾಗಿ ಹಾಲಿ ಬಳಕೆ ಮಾಡುತ್ತಿರುವ ರಸ್ತೆಯ ವಿವರ ವಾಹನಗಳು ಸಂಚರಿಸುವ ಪರ್ಯಾಯ ಮಾರ್ಗಗಳ ವಿವರ
1 ಶಿವಮೊಗ್ಗ ಮಾರ್ಗದಿಂದ ಕುಂದಾಪುರ ಮತ್ತು ಕುಂದಾಪುರದಿಂದ-ಶಿವಮೊಗ್ಗಕ್ಕೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ಸಾಗರ-ಹೊನ್ನಾವರ(ಎನ್‍ಹೆಚ್69) ಮಾರ್ಗದಲ್ಲಿ ಸಂಚರಿಸುವುದು.
2 ಶಿವಮೊಗ್ಗದಿಂದ ಉಡುಪಿ-ಮಂಗಳೂರು ಮತ್ತು ಮಂಗಳೂರಿನಿಂದ ಉಡುಪಿ ಶಿವಮೊಗ್ಗಕ್ಕೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ಕೊಪ್ಪ-ಕಾರ್ಕಳ-ಮಂಗಳೂರು(ಎಸ್‍ಹೆಚ್ 57, 65 ಮತ್ತು ಎನ್‍ಹೆಚ್ 169ರಲ್ಲಿ) ಮಾರ್ಗದಲ್ಲಿ ಸಂಚರಿಸುವುದು.

ಕುಸಿದಿರುವ ಸೇತುವೆ ಮತ್ತು ರಸ್ತೆ ದುರಸ್ತಿ ಆಗುವವರೆಗೆ ಅಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಮೇಲ್ಕಂಡಂತೆ ಮಾರ್ಪಡಿಸಿ ಪರ್ಯಾಯ ಮಾರ್ಗಗಳಲ್ಲಿ ತಾತ್ಕಾಲಿಕ ವಾಹನ ಸಂಚಾರ ವ್ಯವಸ್ಥೆಯನ್ನು ಮಾಡಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶಿಸಿದ್ದಾರೆ.
error: Content is protected !!