ಶಿವಮೊಗ್ಗ, ಸೆಪ್ಟೆಂಬರ್ 29 : ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಶಿವಮೊಗ್ಗ ಹಾಗೂ ನಿಹಾರಿಕಾ ಕಿಸಾನ್ ಪರಂಪರ ಸಂಘ, ವಾಲ್ಮೀಕಿ ಯುವಕರ ಸಂಘ, ಅಂಬೇಡ್ಕರ್ ಯುವಕರ ಸಂಘ, ರಾಮನಗರ ಮತ್ತು ರಾಮನಗರ ಗ್ರಾ.ಪಂ ಇವರ ಸಹಯೋಗದಲ್ಲಿ ಸೆ.28 ರಂದು ಶಿವಮೊಗ್ಗ ಜಿಲ್ಲೆಯ ರಾಮನಗರ ಗ್ರಾ.ಪಂ ವ್ಯಾಪ್ತಿಯಲ್ಲಿ ಸ್ವಚ್ಚತಾ ಅರಿವು ಮತ್ತು ಶ್ರಮದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪೂರ್ಣಿಮಾ ಹಾಗೂ ಉಪಾಧ್ಯಕ್ಷೆ ಸೌಮ್ಯಾ ಸಸಿಗಳನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅರಣ್ಯ ರಕ್ಷಣೆ ಮತ್ತು ಸ್ವಚ್ಚತೆ ಕುರಿತು ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಸ್ವಚ್ಚತೆ ಮತ್ತು ಹಸುರೀಕರಣ ಕುರಿತು ಅರಿವು ಮೂಡಿಸಲು ಜಿಲ್ಲಾ ಪಂಚಾಯತ್ ಕಾರ್ಯಕ್ರಮ ನಿಯೋಜನ ಗಣೇಶ್, ನೆಹರು ಯುವ ಕೇಂದ್ರದ ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ, ನೆಹರು ಯುವ ಕೇಂದ್ರದ ಕಾರ್ಯಕರ್ತರು, ನಿಹಾರಿಕಾ ಕಿಸಾನ್ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರೊಡಗೂಡಿ ಸ್ವಚ್ಚತಾ ಅರಿವು ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು.