
ಶಿವಮೊಗ್ಗ, ಸೆಪ್ಟೆಂಬರ್ 29, :“ಸ್ವಚ್ಚತೆಯೇ ಸೇವೆ”ಅಭಿಯಾನದ ಅಂಗವಾಗಿ ಶಿವಮೊಗ್ಗದ ಕೇಂದ್ರ ಸಂವಹನ ಇಲಾಖೆ ವತಿಯಿಂದ ಗಾಡಿಕೊಪ್ಪ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.

ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳಿಗೆ “ಸ್ವಚ್ಚತೆಯೇ ಸೇವೆ” ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ವೇಳೆ ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರ ಅಧಿಕಾರಿ ಅಕ್ಷತಾ ಸಿ.ಹೆಚ್ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಸ್ವಚ್ಛ ಭಾರತದ ಕನಸನ್ನು ನನಸಾಗಿಸುವಲ್ಲಿ ವಿದ್ಯಾರ್ಥಿ ಸಮುದಾಯ ಕೈಜೋಡಿಸಬೇಕು. ತಮ್ಮ ಶಾಲಾ ಆವರಣ, ಮನೆ ಹಾಗೂ ಸಾರ್ವಜನಿಕ ಸ್ಥಳಗಳನ್ನು ಶುಚಿಯಾಗಿಡುವ ಮೂಲಕ ವಿದ್ಯಾರ್ಥಿಗಳು ಸ್ವಚ್ಛ ಭಾರತ ನಿರ್ಮಾಣ ಮಾಡವಲ್ಲಿ ಮುಂದಾಗಬೇಕೆಂದು ಹೇಳಿದರು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ನಾಗರಾಜ್ .ಎಮ್ ಮಾತನಾಡಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದವರು. ಅವರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.
ಬಳಿಕ ಶಾಲಾ ಆವರಣದಲ್ಲಿ ಸ್ವಚ್ಚತಾ ಕಾರ್ಯ ನೆರವೇರಿಸಲಾಯಿತು.