ಶಿವಮೊಗ್ಗ ಜನವರಿ 06 ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿಗೆ ಸೇರಿದವರಾಗಿರಬೇಕು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ). ಅರ್ಜಿಯನ್ನು ಸೇವಾಸಿಂಧು ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ಸಲ್ಲಿಸಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶ ರೂ.98,000/-ಗಳು ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಹೊಲಿಗೆ ಯಂತ್ರ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿರಬೇಕು. ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು ಇರಬೇಕು.