ಹರ್ಷ ಸಂಬಂಧಿಕರ ಆಕ್ರಂದನಕ್ಕೆ ಮಮ್ಮುಲ ಮರುಗಿದ ಸಚಿವ ಡಾ.ನಾರಾಯಣಗೌಡ*
ಶಿವಮೊಗ್ಗ, ಫೆ.21: ನಿನ್ನೆ ರಾತ್ರಿ ಹತ್ಯೆಗೀಡಾದ ಸಿಗೇಹಟ್ಟಿ ಹರ್ಷ ನಿವಾಸಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ತಂದೆ, ತಾಯಿ, ಸಹೋದರಿಯರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.
ಹತ್ಯೆಗೀಡಾದ ಹರ್ಷ ಕುಟುಂಬಸ್ಥರು, ಸಂಬಂಧಿಕರ ಆಕ್ರಂದನ, ಕುಟುಂಬಸ್ಥರನ್ನು ಕಂಡು ಸಚಿವ ಡಾ.ನಾರಾಯಣಗೌಡ ಅವರು ಮಮ್ಮುಲ ಮರುಗಿದರು. ಶೀಘ್ರವೇ ನ್ಯಾಯ ಒದಗಿಸುವ ಭರವಸೆ ನೀಡಿದರು. ಇದೇ ವೇಳೆ ಸಚಿವ ಡಾ.ನಾರಾಯಣಗೌಡ ಅವರು, ವೈಯಕ್ತಿಕವಾಗಿ ಒಂದು ಲಕ್ಷ ರೂ. ಆರ್ಥಿಕ ನೆರವು ನೀಡಿದರು.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದ ತಕ್ಷಣ ಜಿಲ್ಲಾಧಿಕಾರಿ ಡಾ.ಸೆಲ್ವಾಮಣಿ, ಐಜಿ , ಎಸ್‌ಪಿ ಲಕ್ಷ್ಮೀ ಪ್ರಸಾದ್ ಅವರ ಜೊತೆ ಸಭೆ ನಡೆಸಿ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿ, ಶಾಂತಿ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇಂದು ರಾತ್ರಿ ಖುದ್ದುಇಲ್ಲೇ ಇದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತೇನೆ.