ಶಿವಮೊಗ್ಗ ಸೆಪ್ಟೆಂಬರ್ 20: 2022 ರ ಅಕ್ಟೋಬರ್ 1 ರಂದು ನಡೆಯಲಿರುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಿರಿಯ ನಾಗರೀಕರಿಗೆ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪಧೆಗಳನ್ನು ಸೆ.25 ರ ಭಾನುವಾರ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಕ್ರೀಡೆ ಮತ್ತು ಸಾಂಸ್ಕøಇಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಸ್ಪರ್ಧಾರ್ಥಿಗಳು 60 ವರ್ಷ ಮೇಲ್ಪಟ್ಟವರಾಗಿದ್ದು, ಆಧಾರ್ ಕಾರ್ಡ್ ಮತ್ತು ಹಿರಿಯ ನಾಗರಿಕರ ಗುರುತಿನ ಚೀಟಿಯೊಂದಿಗೆ ಸೆ.23 ರೊಳಗಾಗಿ ನಾಗರಿಕರ ಸಹಾಯವಾಣಿ ಕೇಂದ್ರ, ಡಿವೈಎಸ್‍ಪಿ ಕಚೇರಿ ಆವರಣ ಶಿವಮೊಗ್ಗ ಇಲ್ಲಿ ನೋಂದಣಿ ಮಾಡಿಸಿಕೊಳ್ಳತಕ್ಕದ್ದು. ನೋಂದಣಿಗಾಗಿ ಯುವರಾಜ ಮೊಬೈಲ್ ಸಂಖ್ಯೆ 9632570371, ಚಂದ್ರು 9108984207, ದೂ.ಸಂ: 08182-260424 ನ್ನು ಸಂಪರ್ಕಿಸಬಹುದು.
ಕ್ರೀಡಾ ಸ್ಪರ್ಧೆಗಳು : ಪುರುಷರಿಗೆ 60 ರಿಂದ 69 ವರ್ಷದವರು, 70 ರಿಂದ 79 ವರ್ಷದವರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ನಡಿಗೆ, ರಿಂಗ್‍ನ್ನು ಬಕೆಟ್‍ನಲ್ಲಿ ಎಸೆಯುವುದು, ಮ್ಯೂಸಿಕಲ್ ಚೇರ್ಸ್ ಸ್ಪರ್ಧೆಯನ್ನು ಮತ್ತು ಮಹಿಳೆಯರಿಗೆ 60 ರಿಂದ 69 ವರ್ಷದವರು, 70 ರಿಂದ 79 ವರ್ಷದವರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ನಡಿಗೆ, ರಿಂಗ್‍ನ್ನು ಬಕೆಟ್‍ನಲ್ಲಿ ಎಸೆಯುವುದು, ಮ್ಯೂಸಿಕಲ್ ಚೇರ್ಸ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ

ಸಾಂಸ್ಕøತಿಕ ಸ್ಪರ್ಧೆಗಳು : ಪುರುಷರಿಗೆ 60 ರಿಂದ 69 ವರ್ಷದವರು, 70 ರಿಂದ 79 ವರ್ಷದವರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ಏಕಪಾತ್ರಾಭಿನಯ, ಗಾಯನ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆಗಳು ಮತ್ತು ಮಹಿಳೆಯರಿಗೆ 60 ರಿಂದ 69 ವರ್ಷದವರು, 70 ರಿಂದ 79 ವರ್ಷದವರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ಏಕಪಾತ್ರಾಭಿನಯ, ಗಾಯನ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

error: Content is protected !!