ಯೋಜನೆಯನ್ವಯ ಶಿವಮೊಗ್ಗ ಜಿಲ್ಲೆಯ ರೈತರು ತಮ್ಮ ಜಮೀನುಗಳ ಸರ್ವೆ ನಂಬರ್, ಹಿಸ್ಸಾ ನಂಬರ್ವಾರು ತಾವು ಬೆಳೆದ ಬೇಸಿಗೆ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಸ್ವತಃ ತಾವೇ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಮೂಲಕ ದಾಖÀಲಿಸÀಬಹುದಾಗಿದೆ. ರೈತರು ತಮ್ಮ ಆಂಡ್ರಾಯ್ಡ್ ಮೊಬೈಲ್ನ ಗೂಗಲ್ ಪ್ಲೇಸ್ಟೋರ್ನಲ್ಲಿ ಬೇಸಿಗೆ ಹಂಗಾಮಿನ ರೈತರ ಬೆಳೆ ಸಮೀಕ್ಷೆ ಆಪ್ 2020-21 (Summer Farmer Crop Survey 2020-21) ಆಪ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ದಾಖಲಿಸಲು ತಿಳಿಸಿದೆ.
ಬೆಳೆ ಸಮೀಕ್ಷೆ ದತ್ತಾಂಶವನ್ನು ಸಾಂಖ್ಯಿಕ ಇಲಾಖೆ, ಕೃಷಿ, ರೇಷ್ಮೆ, ಮತ್ತು ತೋಟಗಾರಿಕೆ ಬೆಳೆಗಳ ವಿಸ್ತೀರ್ಣವನ್ನು ಲೆಕ್ಕ ಹಾಕುವ ಕಾರ್ಯದಲ್ಲಿ, ಬೆಳೆ ವಿಮೆ ಯೋಜನೆಯ ತಾಕು ಹಂತದ ಬೆಳೆ ಪರಿಶೀಲನೆಗೆ, ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಹಾಗೂ ತಾಕಿನ ಸರ್ವೇ ನಂಬರ್ ಆಯ್ಕೆಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಆರ್.ಟಿ.ಸಿಯಲ್ಲಿ ಬೆಳೆ ವಿವರ ದಾಖಲಾತಿಗಾಗಿ, ಎನ್.ಡಿ.ಆರ್.ಎಫ್, ಮತ್ತು ಎಸ್.ಡಿ.ಆರ್.ಎಫ್.ನಡಿ ಸಹಾಯಧನ ನೀಡಲು ಅಂದರೆ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ವರದಿ ಸಿದ್ದಪಡಿಸುವಲ್ಲಿ, ಹಾನಿಗೊಳಗಾದ ಬೆಳೆ ವಿಸ್ತೀರ್ಣದ ವಿವರ ಸಿದ್ದಪಡಿಸುವಲ್ಲಿ ಮತ್ತು ಅರ್ಹ ಫಲಾನುಭವಿಗಳ ಪಟ್ಟಿಯನ್ನು ತಯಾರಿಸುವ ಸಂದರ್ಭಗಳಲ್ಲಿ ಬೆಳೆ ಸಮೀಕ್ಷೆಯ ಮಾಹಿತಿಯನ್ನೆ ಆಧಾರವಾಗಿಟ್ಟುಕೊಂಡು ಸಿದ್ದಪಡಿಸುವುದರಿಂದ ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಬೆಳೆಗಳ ವಿವರಗಳನ್ನು ರೈತರ ಬೆಳೆ ಸಮೀಕ್ಷೆ ಆಪ್ ನಲ್ಲಿ ನಮೂದಿಸಲು ಕೋರಿದೆ. ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ವಿವರಗಳನ್ನು ರೈತರು ದಿನಾಂಕ 25.03.2021ರ ಒಳಗಾಗಿ ಅಪ್ ಲೋಡ್ ಮಾಡಲು ಕಾಲಮಿತಿಯಿರುತ್ತದೆ.
ರೈತರು ನಿಗದಿತ ಸಮಯದೊಳಗೆ ತಾವು ಬೆಳೆದ ಬೆಳೆ ಮಾಹಿತಿಯನ್ನು ಅಪ್ಲೋಡ್ ಮಾಡದೇ ಇದ್ದ ಪಕ್ಷದಲ್ಲಿ ತಹಶೀಲ್ದಾರ್ರವರ ಅಧ್ಯಕ್ಷತೆಯ ತಾಲ್ಲೂಕು ಮಟ್ಟದ ಸಮಿತಿಯು ನೇಮಿಸಿರುವ ಖಾಸಗಿ ನಿವಾಸಿಗಳ ಸಹಾಯದಿಂದ ತಮ್ಮ ಜಮೀನುಗಳ ಬೆಳೆ ಮಾಹಿತಿಯನ್ನು ಧಾಖಲಿಸಲು ದಿನಾಂಕ 25.03.2021 ರಿಂದ 15.4.2021ರ ವರೆಗೆ ಅವಕಾಶವಿರುತ್ತದೆ.
ರೈತರು ನಿಗದಿತ ಸಮಯದೊಳಗೆ ತಾವು ಬೆಳೆದ ಬೆಳೆಗಳ ಖಚಿತ ಮಾಹಿತಿಯನ್ನು ಮೊಬೈಲ್ ಆಪ್ ಮೂಲಕ ದಾಖಲಿಸಲು ವಿನಂತಿಸಿದೆ, ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರವರ ಕಛೇರಿ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ, ತಹಶೀಲ್ದಾರ್ರವರ ಕಛೇರಿ ಅಥವಾ ಸಂಬಂದಪಟ್ಟ ರೇಷ್ಮೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಲು ವಿನಂತಿಸಿದೆ. ಬೆಳೆ ಸಮೀಕ್ಷೆ ಸಹಾಯವಾಣಿ 8448447715 ಗೆ ಕರೆಮಾಡಿ ಮಾಹಿತಿ ಪಡೆಯಬಹುದಾಗಿದೆ.
ಶಿವಮೊಗ್ಗ
ದಿನಾಂಕ:15-03-2021
ಜಂಟಿ ಕೃಷಿ ನಿರ್ದೇಶಕರು
ಶಿವಮೊಗ್ಗ