ಶಿವಮೊಗ್ಗ, ಮೇ 31 : ಕೃಷಿ ಇಲಾಖೆಯು 2024-25 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿಯಲ್ಲಿ ಬೆಳೆ ವಿಮಾ ಯೋಜನೆಯನ್ನು ಸರ್ಕಾರದಿಂದ ಆಯ್ಕೆಯಾದ ಓರಿಯೆಂಟಲ್ ಜನರಲ್ ಇನ್ಶ್ಯೂರೆನ್ಸ್ ಕಂಪನಿ ಸಹಯೋಗದೊಂದಿಗೆ ಅನುಷ್ಟಾನಗೊಳಿಸುತ್ತಿದ್ದು, ರೈತರು ಬೆಳೆ ವಿಮೆ ನೋಂದಣಿ ಮಾಡಲು ಅರ್ಜಿ ಆಹ್ವಾನಿಸಿದೆ.
ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ಮಳೆ ಆಶ್ರಿತ ರಾಗಿ ಹಾಗೂ ಜೋಳ ಮತ್ತು ಗ್ರಾಮ ಪಂಚಾಯಿತಿ ಮಟ್ಟಕ್ಕೆ ನೀರಾವರಿ ಭತ್ತ, ಮುಸುಕಿನ ಜೋಳ ಆಯ್ಕೆಯಾಗಿದ್ದು, ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆ ವಿಮೆಗಾಗಿ ಬೆಳೆಸಾಲ ಪಡೆದ ಮತ್ತು ಪಡೆಯದ ರೈತರು ಈ ಯೋಜನೆಯಡಿ ನೋಂದಾಯಿಸಲು ಮುಸುಕಿನ ಜೋಳ ಬೆಳೆಗೆ ಜುಲೈ 31 ಹಾಗೂ ಭತ್ತ, ಜೋಳ ಮತ್ತು ರಾಗಿ ಬೆಳೆಗಳಿಗೆ ಆಗಸ್ಟ್ 16 ಕೊನೆಯ ದಿನಾಂಕಗಳಾಗಿರುತ್ತದೆ.
ಬಿತ್ತನೆ/ನಾಟಿ ಮಾಡುವುದಕ್ಕಿಂತ ಮುಂಚಿತವಾಗಿ ನೋಂದಾಯಿಸಬುದಾಗಿದೆ. ಬೆಳೆ ಸಾಲ ಪಡೆಯುವ ರೈತರನ್ನು ಬೆಳೆ ವಿಮಾ ಯೋಜನೆಯಡಿ ಕಡ್ಡಾಯವಾಗಿ ಒಳಪಡಿಸಲಾಗುವುದು, ತದನಂತರ ಬೆಳೆಸಾಲ ಪಡೆದ ರೈತ ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಪಡದೇ ಇದ್ದಲ್ಲಿ ಅಂತಿಮ ದಿನಾಂಕಕ್ಕೆ 7 ದಿನ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ನೀಡಿ ಕೈಬಿಡಲಾಗುವುದು. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ ಮತ್ತು ಆಧಾರ್ ಸಂಖ್ಯೆ ಸಹಿತ ಹತ್ತಿರವಿರುವ ಬ್ಯಾಂಕ್/ಆರ್ಥಿಕ ಸಂಸ್ಥೆಗಳು/ ಸಾರ್ವಜನಿಕ ಸೇವಾಕೇಂದ್ರಗಳಲ್ಲಿ (ಸಿಎಸ್ಸಿ ಕೇಂದ್ರಗಳು) ನೋಂದಾಯಿಸಿಕೊಳ್ಳುವಂತೆ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.