ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೆವಿಕೆ ಗಳ ಪಾತ್ರ ಪ್ರಮುಖ : ವಿ.ವೆಂಕಟ ಸುಬ್ರಮಣಿಯನ್
ಶಿವಮೊಗ್ಗ,ಏ.26 : ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಪಾತ್ರ ಪ್ರಮುಖವಾಗಿದ್ದು, ನೂತನವಾಗಿ ಆರಂಭವಾಗುತ್ತಿರುವ ಕಿಸಾನ್ ಸಮೃದ್ಧಿ ಬ್ರಾಂಡಿಂಗ್ ಒಂದು ಮೈಲಿಗಲ್ಲಾಗಿದೆ ಎಂದು ಕೆವಿಕೆ ಅಟಾರಿ ವಲಯ ೧೧ ರ ನಿರ್ದೇಶಕ ವಿ.ವೆಂಕಟ ಸುಬ್ರಮಣಿಯನ್ ತಿಳಿಸಿದರು.


ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ನವಿಲೆ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಏ.26 ರಿಂದ 28 ರವರೆಗೆ ಹಮ್ಮಿಕೊಳ್ಳಲಾಗಿರುವ ವೈವಿಧ್ಯಮಯ ಹಣ್ಣುಗಳು ಮತ್ತು ಆಹಾರ ಮೇಳವನ್ನು ರಜತ ಸಂಭ್ರಮ ಸ್ಮರಣಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
ಅವರು ಮಾತನಾಡಿದರು
ಕೃಷಿ, ಹಣ್ಣು ಮೇಳಗಳ ಆಯೋಜನೆಯು ಕೃಷಿ‌ಕ್ಷೇತ್ರ ಸಬಲೀಕರಣಗೊಳಿಸುವಲ್ಲಿ ಉತ್ತಮ‌ ಕಾರ್ಯವಾಗಿದ್ದು‌, ಇದನ್ನು ಉತ್ತೇಜಿಸುತ್ತಿರುವ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಅಭ್ಯಾಸ ನಂದನೆಗಳು. ಕೃಷಿ ಕ್ಷೇತ್ರದಲ್ಲಿನ ಕ್ರಾಂತಿಕಾರಿಕ ಅಭಿವೃದ್ಧಿಯಲ್ಲಿ ಕೃಷಿ ವಿಜ್ಞಾನ ಕೇಂದ್ರಗಳು ಅತ್ಯುತ್ತಮ ಕೆಲಸ ಮಾಡುತ್ತಿವೆ.
ಕಿಸಾನ್ ಸಮೃದ್ದಿ ಯೋಜನೆಯಿಂದ ರೈತರಿಗೆ ಅನೇಕ ಲಾಭಗಳು ದೊರೆಯುತ್ತಿದ್ದು ದೇಶದಾದ್ಯಂತ ರೈತರ ಉತ್ಪನ್ನಗಳಿಗೆ ಬ್ರಾಂಡಿಂಗ್ ಲಭಿಸುತ್ತಿದ್ದಯ, ಆನ್ ಲೈನ್ ಮಾರುಕಟ್ಟೆಗೂ ಉತ್ತೇಜನ ದೊರೆಯುತ್ತಿದೆ.
ಸ್ವಾತಂತ್ರ್ಯದ ವೇಳೆ ದೇಶ ಆಹಾರ ಕೊರತೆಯಲ್ಲಿತ್ತು, ಇದೀಗ ಆಹಾರ ಉತ್ಪನ್ನಗಳಲ್ಲಿ ಸಮೃದ್ದಿ ಸಾಧಿಸಿದ್ದು ಆಹಾರ ಉತ್ಪನ್ನಗಳ ರಫ್ತಿನಲ್ಲೇ ಮೊದಲ ಸ್ಥಾನದಲ್ಲಿದೆ. ಕೃಷಿ ಸಮೃದ್ದಿ ಆಗುತ್ತಿದೆ.‌ಎಲ್ಲೆಡೆ ಕಿಸಾನ್ ಸಮೃದ್ದಿ ಕೇಂದ್ರಗಳಿವೆ .‌ರೈತರು ಆಹಾರ, ಪೋಷಕಾಂಶಗಳ ಭದ್ರತೆ ನೀಡುತ್ತಿದ್ದಾರೆ. ವಿಶ್ವಕ್ಕೇ ಆಹಾರ ನೀಡುತ್ತಿರುವ ನಾವು ಸೂಪರ್ ಪವರ್ ಆಗಿ ಹೊರಹೊಮ್ಮುತ್ತಿದ್ದೇವೆ.
ತರೀಕೆರೆ ಶಾಸಕರು ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಜಿ.ಹೆಚ್. ಶ್ರೀನಿವಾಸ
ಮಾತನಾಡಿ, ಕೆವಿಕೆ ೨ ಲಕ್ಷ ಜನರಿಗೆ ನೇರ ತರಬೇತಿ ನೀಡಿತ್ತಿದಗದು, ಪರೋಕ್ಷವಾಗಿ ೩೫ ಲಕ್ಷ ಜನರಿಗೆ ಸಹಕಾರಿಯಾಗಿದೆ. ಬೀಜ ಉತ್ಪಾದನೆ , ತಾಂತ್ರಿಕತೆಯಲ್ಲಿ ಉತ್ತಮ ಸಾಧನೆ ಮಾಡಲಾಗಿದೆ. ರೈತರಿಗೆ ಬಹು ಉಪಯೋಗವಾಗುವ ಕೆಲಸ ಕೆವಿಕೆ ಮಾಡುತ್ತದೆ ಇದೆ. ಚಿಕ್ಕಮಗಳೂರು ಕೆವಿಕೆ ಸಂಸ್ಥೆಗಳಲ್ಲಿ ಸಹ ಉತ್ತಮ ಕೆಲಸ ಆಗುತ್ತದೆ.ಕೃಷಿ ವಿದ್ಯಾರ್ಥಿಗಳು ೩ ತಿಂಗಳು ರೈತರೊಂದಿಗೆ ಬೆರೆತು ಮಾಹಿತಿ‌ ನೀಡುತ್ತಾ ಉತ್ತಮ ಕೆಲಸ ಮಾಡುತ್ತಿದ್ದಾರೆ. ಜೇನು, ಮೀನುಗಾರಿಕೆ ಹೀಗೆ ಸಮಗ್ರ ಕೃಷಿ ಮೂಲಕ ರೈತರಿಗೆ ಸಹಕಾರಿಯಾದ ಕೆವಿಕೆ ಅಭಿವೃದ್ಧಿ ಆಗಲಿ ಎಂದರು.
ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಮಾತನಾಡಿ, ಕ್ರಾಂತಿಕಾರಿ ಬದಲಾವಣೆಗೆ ಕೃಷಿ ವಿವಿ‌ ಬೇಕೆಂಬ ಉದ್ದೇಶದಿಂದ ವಿವಿ ಸ್ಥಾಪನೆಯಾಗಿದ್ದು ರೈತರಿಗೆ, ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಹಾಗೂ ಯುವಜನತೆಗೆ ತರಬೇತಿ, ಮಾಹಿತಿ ನೀಡುವಲ್ಲಿ ಬಹಳ ದೊಡ್ಡ ಪಾತ್ರ ವಹಿಸುತ್ತಿದೆ. ಕೃಷಿಯಿಂದ ಉದ್ಯೋಗಾವಕಾಶ ಕೂಡ ಹೆಚ್ಚಾಗಿದೆ ಎಂದರು.
ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯಾನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ರೈತ ಮುಖಂಡರಾದ ಕೆ.ಟಿ.ಗಂಗಾಧರ್,
ಕೃಷಿ ಸಮಾಜದ ಅಧ್ಯಕ್ಷ ನಾಗರಾಜ್ ಹೆಚ್ ಎನ್ , ಡಾ.ಪಿ.ಕೆ.ಬಸವರಾಜ್, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಆರ್.ಸಿ.ಜಗದೀಶ್ ,
ರಾಯಚೂರು ವಿಶ್ವವಿದ್ಯಾಲಯದ ಡಾ.ಎನ್ ಹನುಮಂತಪ್ಪ,ವಿಶ್ರಾಂತ ಕುಲಪತಿ ಡಾ.ಪಿ.ನಾರಾಯಣಸ್ವಾಮಿ, ಡಾ.ದಿನಕರ್, ಡಾ.ರವಿ ಭಟ್, ಇತರೆ ಅಧಿಕಾರಿಗಳು, ವಿಜ್ಞಾನಿಗಳು, ವಿದ್ಯಾರ್ಥಿಗಳು, ರೈತರು ಪಾಲ್ಗೊಂಡಿದ್ದರು.
ಕೆವಿಕೆ ಮುಖ್ಯಸ್ಥ ಡಾ. ಸುನೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಸ್ತರಣಾಧಿಕಾರಿ ಡಾ.ಜಿ.ಕೆ ಗಿರಿಜೇಶ್ ಸ್ವಾಗತಿಸಿದರು.
……..
ಹಣ್ಣು ಪ್ರಿಯರಿಗಾಗಿ ಹಣ್ಣುಗಳ ರಾಜನೆಂದೇ ಕರೆಯಲ್ಪಡುವ ಮಾವಿನ ಹಣ್ಣಿನ 30 ವಿಶಿಷ್ಟ ಮಾವಿನ ತಳಿಗಳಾದ ಆಲ್ಫಾನ್ಸೋ, ಬಾದಾಮಿ, ಕೇಸರ್, ಮಲಗೋವಾ, ಮಲ್ಲಿಕಾ, ನೀಲಂ, ರಸಪುರಿ, ಸಿಂಧೂರ, ತೋತಾಪುರಿ, ಅಪ್ಪೆ ಮಿಡಿ ತಳಿಗಳ ಪ್ರದರ್ಶನ ಮತ್ತು ಮಾರಾಟವಿದೆ. ಅಲ್ಲದೆ, 20 ವಿವಿಧ ಹಲಸಿನ ತಳಿಗಳಾದ ಸಿದ್ದು ಹಲಸು, ಶಂಕರ, ಸರ್ವಋತು, ರುದ್ರಾಕ್ಷಿ. ಕೆಂಪು, ಚಂದ್ರ ಹಲಸು, ಹೆಬ್ಬಾಳ ಸೇರಿದಂತೆ ಸಖರಾಯಪಟ್ಟಣದ ಸ್ಥಳೀಯ ವಿಶೇಷ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮತ್ತು ವಿವಿಧ ತಳಿಯ ಬಾಳೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟವಿದೆ.
ಬಿಜಾಪುರ, ಬಾಗಲಕೋಟೆ ಮತ್ತಿತರ ಭಾಗಗಳಿಂದ ಥಾಮ್ಸನ್ ಸೀಡ್‌ಲೆಸ್, ಶರದ್, ಕೃಷ್ಣ ಶರದ್ ಇತ್ಯಾದಿ ತಳಿಯ ರುಚಿಕರ ದ್ರಾಕ್ಷಿ ಹಣ್ಣುಗಳು ಆಗಮಿಸುತ್ತಿವೆ. ಬೆಂಗಳೂರು ಗ್ರಾಮಾಂತರ ಭಾಗದಿಂದ ಬೆಂಗಳೂರು ಬ್ಲೂ ದ್ರಾಕ್ಷಿ ಬರಲಿದೆ. ಹೀಗಾಗಿ ದ್ರಾಕ್ಷಿ ಪ್ರಿಯರಿಗೆ ಬಗೆ ಬಗೆಯ ಹಣ್ಣುಗಳು ಲಭಿಸಲಿವೆ. ಅಲ್ಲದೆ, ಗೆಡ್ಡೆ-ಗೆಣಸು ತಳಿಗಳ ಪ್ರದರ್ಶನ ಹಾಗೂ ಬೇಲದ ಹಣ್ಣು, ಅಂಜೂರ ಹಣ್ಣು, ಬಿಜಾಪುರದ ನಿಂಬೆ ಹಣ್ಣು, ಮತ್ತು ಇವುಗಳ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಏರ್ಪಡಿಸಲಾಗಿದೆ ಮತ್ತು ರೈತರು ತಾವೇ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ.

Leave a Reply

error: Content is protected !!