ಶಿವಮೊಗ್ಗ : ಇಂಡಿಯನ್ ಸೊಸೈಟಿ ಆಫ್ ಪ್ರೊಫೆಷನಲ್ ಸೋಶಿಯಲ್ ವರ್ಕ್ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗ ಮತ್ತು ಮೈಸೂರು ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗಗಳ ಸಹಯೋಗದೊಂದಿಗೆ ಮೈಸೂರಿನ ಮುಕ್ತಗಂಗೋತ್ರಿ ಹಾಗೂ ಮಾನಸಗಂಗೋತ್ರಿಯಲ್ಲಿ ಸಮಾಜಕಾರ್ಯದ ಮೂರು ದಿನದ ರಾಷ್ಟ್ರಮಟ್ಟದ ಸಮ್ಮೇಳನವು ನೆರವೇರಿತು.

ಈ ರಾಷ್ಟ್ರಮಟ್ಟದ ಸಮ್ಮೇಳನದಲ್ಲಿ ಶಿವಮೊಗ್ಗದ ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ನ್ಯಾನ್ಸಿ ಲವಿನಾ ಪಿಂಟೊ ರವರು “ವಿವಾಹಿತ ಮತ್ತು ಅವಿವಾಹಿತ ಮಹಿಳೆಯರಲ್ಲಿ ಕೆಲಸದ ಜೀವನದ ಸಮತೋಲನದ ಮೇಲೆ ತುಲನಾತ್ಮಕ ಅಧ್ಯಯನ” ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪತ್ರಿಕೆಗೆ ಉಪನ್ಯಾಸಕರ ವಿಭಾಗದಲ್ಲಿ ಅತ್ಯುತ್ತಮ ಸಂಶೋಧನಾ ಪತ್ರಿಕೆ ಪ್ರಶಸ್ತಿ ಲಭಿಸಿದೆ ಹಾಗೂ ಪ್ರಥಮ ವರ್ಷದ ಬಿ ಎಸ್ ಡಬ್ಲ್ಯೂ ವಿದ್ಯಾರ್ಥಿನಿ ಸ್ಪೂರ್ತಿ.ವೈ.ಹೆಚ್ ರವರು “ಕರ್ನಾಟಕ ರಾಜ್ಯದ ರೈತರು ಮತ್ತು ಇತರ ವೃತ್ತಿಪರರಲ್ಲಿ ಗ್ರಹಿಸಿದ ಒತ್ತಡದ ಮೇಲೆ ತುಲನಾತ್ಮಕ ಅಧ್ಯಯನ” ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪತ್ರಿಕೆಗೆ ವಿದ್ಯಾರ್ಥಿ ವಿಭಾಗದಲ್ಲಿ ಅತ್ಯುತ್ತಮ ಸಂಶೋಧನಾ ಪತ್ರಿಕೆ ಪ್ರಶಸ್ತಿಯು ಲಭಿಸಿದೆ.

ಈ ರಾಷ್ಟ್ರೀಯ ಸಮ್ಮೇಳನದಲ್ಲಿ ಸುಮಾರು 500 ಕ್ಕೂ ಹೆಚ್ಚು ಸಂಶೋಧನಾ ಪತ್ರಿಕೆಗಳನ್ನು ಮಂಡಿಸಲಾಗಿತ್ತು ಹಾಗೂ ಈ ಸಮ್ಮೇಳನದಲ್ಲಿ ಸುಮಾರು 1,500 ಕ್ಕಿಂತ ಹೆಚ್ಚಿನ ಸಮಾಜಕಾರ್ಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರುಗಳು ಭಾಗವಹಿಸಿದ್ದರು.

ಉಪನ್ಯಾಸಕಿ ಹಾಗೂ ವಿದ್ಯಾರ್ಥಿನಿಯ ಈ ಸಾಧನೆಗೆ ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾ.ರಜನಿ ಪೈ, ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಡಾ.ಪ್ರೀತಿ.ವಿ.ಶಾನ್ ಭಾಗ್, ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿ, ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ ಮಂಜುನಾಥ್ ಸ್ವಾಮಿ ಹಾಗೂ ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

error: Content is protected !!