ಶಿವಮೊಗ್ಗ ಡಿಸೆಂಬರ್ 23 : ಗಣಿತ ಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಇವರ ಜನ್ಮದಿನದ ಅಂಗವಾಗಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಬೆಂಗಳೂರು, ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಡಿ.22 ರಂದು ಕಾಚಿನಕಟ್ಟೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಭಾ.ಆ.ಸೇ ಪ್ರೊಬೇಷನರಿ ಅಧಿಕಾರಿ ದಲ್ಜೀತ್ ಕುಮಾರ್ ಉದ್ಘಾಟಿಸಿ ಮಾತನಾಡಿ, ರಾಮನುಜನ್ ಶ್ರೀನಿವಾಸರವರ ಬದುಕಿನ ವಿವಿಧ ಪ್ರಮುಖ ಘಟ್ಟಗಳನ್ನು ವಿವರಿಸಿ, ಕಬ್ಬಿಣದ ಕಡಲೆ ಎಂದುಕೊಳ್ಳುವ ವಿಧ್ಯಾರ್ಥಿಗಳು ಗಣಿತವನ್ನು ಹೇಗೆ ತಮ್ಮದಾಗಿಸಿಕೊಳ್ಳಬಹುದೆಂದು ತಿಳಿಸಿದರು. ಹಾಗೂ ಭಾರತೀಯ ಆಡಳಿತ ಸೇವೆಗೆ ಸಂಬಂಧಿಸಿದ ವಿಚಾರಗಳ ಕುರಿತು ಶಾಲಾ ವಿಧ್ಯಾರ್ಥಿಗಳೊಡನೆ ಮುಖಾಮುಖಿ ಸಂವಾದ ನಡೆಸಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿ.ಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮಾತನಾಡಿ, ದಿನನಿತ್ಯದ ಜೀವನದಲ್ಲಿ ಗಣಿತದ ಪಾತ್ರದ ಕುರಿತಾಗಿ ವಿದ್ಯಾರ್ಥಿಗಳಿಗೆ ಸವಿವರಾಗಿ ತಿಳಿಸಿದ ಅವರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳಿಗೆ ಇಂತಹ ಕಾರ್ಯಕ್ರಮಗಳು ಅವಶ್ಯಕವಾಗಿವೆ ಎಂದು ತಿಳಿಸಿದರು.
ಕೊರಲಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್, ಜಿಲ್ಲಾ ಎನ್‍ಆರ್‍ಡಿಎಂಎಸ್ ಅಧಿಕಾರಿಗಳು, ಶಾಲೆಯ ಮುಖ್ಯೋಪಾಧ್ಯಾಯರು ಭಾಗವಹಿಸಿದ್ದರು,
ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ರಗಿಬ್ ಹುಸೇನ್ ಹಾಗೂ ಕೇಶವ ಪ್ರಸಾದ್ ಇಬ್ಬರು ಗಣಿತದ ಶಾಲಾ ಪಠ್ಯಕ್ಕೆ ಸಂಬಂಧಿಸಿದಂತೆ ವಿವಿಧ ಮಾದರಿಯ ಸಹಾಯದಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ನೂರೈವತ್ತಕ್ಕು ಹೆಚ್ಚು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದ್ದರು ಹಾಗೂ ಮಕ್ಕಳಿಗಾಗಿ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಯ್ತು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.
(ಫೋಟೊ ಇದೆ)

error: Content is protected !!