ಶಿವಮೊಗ್ಗ ಡಿಸೆಂಬರ್ 28 : ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಹಾಗೂ ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಗ್ರಾಮೀಣ ಪ್ರದೇಶದ ರೈತರು/ರೈತ ಮಹಿಳೆಯರು/ ನಿರುದ್ಯೋಗ ಯುವಕ/ಯುವತಿಯರಿಗೆ ನಗರದ ವಿನೋಬನಗರದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಮೇವು ಬೆಳಗಳ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಉಚಿತವಾಗಿ ಆಯೋಜಿಸಲಾಗಿದೆ.
ಈ ತರಬೇತಿಯು ಹಸಿರು ಮೇವಿನ ಬೆಳೆಗಳ ಬೇಸಾಯ ಕ್ರಮಗಳು, ಮೇವು ಬೆಳೆಗಳ ತಾಕುಗಳಿಗೆ ಭೇಟಿ, ಮೇವು ಬೀಜಗಳ ಸಂಸ್ಕರಣೆ ಹಾಗೂ ಮೇವಿನ ತಳಿಗೆ ಪಸರಣೆ-ಪ್ರಾಯೋಗಿಕ ತರಬೇತಿ ಹಾಗೂ ಹುಲ್ಲುಗಾವಲು ನಿರ್ವಹಣೆಯ ಅಗತ್ಯತೆಯ ಕುರಿತಾದ ವಿವಿಧ ವಿಷಯಗಳು ಒಳಗೊಂಡಿರುತ್ತದೆ.
ಆಸಕ್ತರು ತಮ್ಮ ಹೆಸರನ್ನು ಸಹ ಪ್ರಾಧ್ಯಾಪಕರು ಹಾಗೂ ರಾ.ಕೃ.ವಿಕಾಸ ಯೋಜನಾ ಸಂಯೋಜಕರ ಮೊ.ನಂ.: 9916918909/8310384135 ಗಳಿಗೆ ಎಸ್.ಎಂ.ಎಸ್/ವಾಟ್ಸ್ಪ್ ಮಾಡಿ ನೋಂದಾಯಿಸುವುದು ಅಥವಾ ಡಾ.ಆರ್. ಜಯಶ್ರೀ, ಸಹ ಪ್ರಾಧ್ಯಾಪಕರು ಹಾಗೂ ರಾ.ಕೃ.ವಿಕಾಸ ಯೋಜನಾ ಸಂಯೋಜಕರು, ಪ್ರಾಣಿ ಅನುವಂಶೀಯತೆ ಹಾಗೂ ತಳಿಶಾಸ್ತ್ರ ವಿಭಾಗ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇವನ್ನು ಸಂಪರ್ಕಿಸುವುದು.