ಶಿವಮೊಗ್ಗ. ಜೂನ್ 07 :: ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯವು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಸೇವಾಯೋಜನೆ ಘಟಕ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಮಹಾವಿದ್ಯಾಲಯದ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಿತು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಸರಸ್ವತಿ ಕೆ.ಎನ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್.ಮರಿಯಪ್ಪ, ಸಹಾಯಕ ಸಂರಕ್ಷಣಾಧಿಕಾರಿ ಆರ್.ಡಿ.ಪುಟ್ಟನಳ್ಳಿ, ವಲಯ ಅರಣ್ಯಾಧಿಕಾರಿ ಜಯಶ್ ಕೆ.ಸಿ., ಹಾಗೂ ಉಪ ವಲಯ ಅರಣ್ಯಾಧಿಕಾರಿ ರೇವಣಸಿದ್ದಯ್ಯ ಹಿರೇಮಠ್, ಕಾಲೇಜಿನ ಡೀನ್ ಡಾ|| ಪ್ರಕಾಶ್ ನಡೂರ್, ರಾಷ್ಟ್ರೀಯ ಸೇವಾಯೋಜನಾಧಿಕಾರಿ ಡಾ|| ವೆಂಕಟೇಸ್.ಎಂ.ಎಂ., ಡಾ|| ದೂಳಪ್ಪ ಎಂ., ಹಾಗೂ ಇತರ ಗಣ್ಯರು ಸುಮಾರು 3000 ಗಿಡಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿಲಾಯಿತು. ವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸೈಕಲ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸೈಕಲ್ ಜಾಥಾವನ್ನೂ ಹಮ್ಮಿಕೊಳ್ಳಲಾಯಿತು.

error: Content is protected !!