ಶಿವಮೊಗ್ಗ : ಮಾರ್ಚ್ 15 : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಡಳಿತಾರೂಢ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಆಶೋತ್ತರಗಳಿಗೆ ಪೂರಕವಾಗಿ ರೂಪಿಸಿ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಿರುವ ಜನಪರ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆದ ಫಲಾನುಭವಿಗಳೊಂದಿಗೆ ಸಮಾಲೋಚನೆ, ಸೌಲಭ್ಯ ಪಡೆಯುವವರು ಹಾಗೂ ಅರ್ಹರಿರುವವರಿಗೆ ಯೋಜನೆಗಳ ಮಾಹಿತಿ ಹಾಗೂ ಸಂವಾದ ನಡೆಸುವ ಸದುದ್ದೇಶದಿಂದ ಮಾರ್ಚ್ 16ರಂದು ಬೆಳಿಗ್ಗೆ 11ಗಂಟೆಗೆ ನಗರದ ಪ್ರೀಡಂಪಾರ್ಕ್ ಆವರಣದಲ್ಲಿ ಫಲಾನುಭವಿಗಳ ಸಮಾವೇಶವನ್ನು ಆಯೋಜಿಸಿದೆ.

ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಮೂರೂವರೆ ವರ್ಷಗಳ ಅವಧಿಯಲ್ಲಿ ಮತ್ತು ಕೇಂದ್ರ ಸರ್ಕಾರದ ಒಂಬತ್ತು ವರ್ಷಗಳ ಅವಧಿಯಲ್ಲಿ ಅನುಷ್ಠಾನಗೊಳಿಸಲಾದ ಸರ್ಕಾರದ ಯೋಜನೆಗಳ ಫಲಾನುಭವಿಗಳು ಮತ್ತು ಸಾರ್ವಜನಿಕರಿಗೆ ಯೋಜನೆಗಳ ಮಾಹಿತಿ ದೊರೆಯಲಿದೆ.
ಕೇಂದ್ರ ಮತ್ತು ರಾಜ್ಯ ಪುರಸ್ಕøತ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಸರಳವಾಗಿ ಮಾಹಿತಿ ದೊರಕಿಸುವ ಉದ್ದೇಶದಿಂದ ಪ್ರೀಡಂಪಾರ್ಕ್‍ನಲ್ಲಿ ಸುಮಾರು 50ಕ್ಕೂ ಹೆಚ್ಚಿನ ಸ್ಟಾಲ್‍ಗಳನ್ನು ಸೃಜಿಸಿ, ಅವುಗಳಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುಷ್ಠಾನದಲ್ಲಿರುವ ಯೋಜನೆಗಳ ಮಾಹಿತಿಯನ್ನು ಒದಗಿಸಲು ಉದ್ದೇಶಿಸಲಾಗಿದ್ದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಅದರ ಜವಾಬ್ದಾರಿ ನೀಡಲಾಗಿದೆ.

  • ಜಿಲ್ಲೆಯಲ್ಲಿ ಸುಮಾರು 75-80ಲಕ್ಷ ಫಲಾನುಭವಿಗಳು ವಿವಿಧ ಯೋಜನೆಗಳಡಿಯಲ್ಲಿ ಸೌಲಭ್ಯ ಹೊಂದಿದ್ದಾರೆ. ಜಿಲ್ಲೆಯ ವಿವಿಧ ತಾಲೂಕುಗಳಿಂದ ಸರ್ಕಾರದ ಹಲವು ಯೋಜನೆಗಳಲ್ಲಿ ಸೌಲಭ್ಯ ಪಡೆದ ಸುಮಾರು 25000-30,000 ಫಲಾನುಭವಿಗಳು ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅದಕ್ಕಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಅದರ ಜವಾಬ್ದಾರಿಯನ್ನು ವಹಿಸಲಾಗಿದೆ. – ಡಾ|| ಆರ್.ಸೆಲ್ವಮಣಿ, ಜಿಲ್ಲಾಧಿಕಾರಿಗಳು, ಶಿವಮೊಗ್ಗ.
  • ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಬಹುತೇಕ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಿಂದ ಈವರೆಗೆ ಸೌಲಭ್ಯ ಪಡೆದ ಹಾಗೂ ಪಡೆಯಲಿರುವ ಫಲಾನುಭವಿಗಳು ಮತ್ತು ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇದೆ.
    _ ಎನ್.ಡಿ.ಪ್ರಕಾಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿವಮೊಗ್ಗ. ಈ ಕಾರ್ಯಕ್ರಮದಲ್ಲಿ ರೇಷ್ಮೇ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ|| ಕೆ.ಸಿ.ನಾರಾಯಣಗೌಡ ಅವರು ಉಪಸ್ಥಿತರಿರುವರು. ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿರುವರು. ಶಾಸಕ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಂಸದ ಬಿ.ವೈ.ರಾಘವೇಂದ್ರ, ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭೆ ಮತ್ತು ವಿಧಾನ ಪರಿಷತ್‍ಗಳ ಚುನಾಯಿತ ಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ನಿಗಮ-ಮಂಡಳಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿರುವರು.
error: Content is protected !!