ಶಿವಮೊಗ್ಗ, ಜೂನ್.14 ಜಿಲ್ಲೆಯ ವಿವಿಧ ತಾಲ್ಲೂಕುಗಳ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು ಪ್ರವರ್ಗ 1, 2ಎ, 2ಬಿ, 3ಎ, 3ಬಿ ಹಾಗೂ ಇತರೆ ಹಿಂದುಳಿದವರ್ಗ ಮತ್ತು ಎಸ್.ಸಿ ಹಾಗೂ ಎಸ್.ಟಿ ವಿದ್ಯಾರ್ಥಿಗಳು ಇಲಾಖೆ ವೆಬ್‍ಸೈಟ್ www.backwardclasses.kar.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಇ ಮೇಲ್ ಮೂಲಕ ಅಥವಾ ತಾಲ್ಲೂಕು/ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಎಸ್‍ಟಿ ಎಸ್‍ಸಿ ವಿದ್ಯಾರ್ಥಿಗಳ ಪಾಲಕರ ಆದಾಯ ಮಿತಿ 2.50 ಲಕ್ಷ ಹಾಗೂ ಇತರೆ ವರ್ಗಗಳ ಆದಾಯ ಮಿತಿ 1 ಲಕ್ಷಕ್ಕೆ ಸೀಮಿತವಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 12 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 8050370006ಕ್ಕೆ ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!