ಶಿವಮೊಗ್ಗ, ಜೂನ್ 01 : 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
5ನೇ ತರಗತಿಯಿಂದ 10 ನೇ ತರಗತಿವರೆಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 3ಎ, 3ಬಿ, ಪ.ಜಾ/ಪ.ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ತಮ್ಮ ಎಸ್ಎಟಿಎಸ್ ((SATS) ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ https://shp.karnataka.gov.in/ ಇಲ್ಲಿ ಅರ್ಜಿ ಸಲ್ಲಿಸುವುದು. ಜೂ.15 ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಿರುತ್ತದೆ.
ವಿಶೇಷ ಸೂಚನೆ: ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಳ ಎಸ್ಎಟಿಎಸ್ ಐಡಿಯನ್ನು ಪ್ರಸಕ್ತ ಶಾಲೆಯಲ್ಲಿ, ಸಂಬಂಧಿಸಿದ ಮಾಹಿತಿಯನ್ನು ಇಂಧಿಕರಿಸಿ ಅರ್ಜಿ ಸಲ್ಲಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.