ಶಿವಮೊಗ್ಗ, ಜೂನ್ 26, : 2023-24 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ
ಯೋಜನೆಯನ್ನು ಅನುಷ್ಠಾನಗೊಳಿಸಲು ಹೋಬಳಿ ಮತ್ತು ಗ್ರಾಮ ಪಂಚಾಯತಿ ಹಾಗೂ ಬೆಳೆಗಳ
ಘೊಷಣೆ ಬಗ್ಗೆ ಸರ್ಕಾರದ ಅಧಿಸೂಚನೆ ಹೊರಡಿಸಲಾಗಿದ್ದು, ಮುಂಗಾರು ಹಂಗಾಮಿನ ಬೆಳೆ ವಿಮೆಗಾಗಿ
ಬೆಳೆಸಾಲ ಪಡೆದ ಮತ್ತು ಪಡೆಯದ ರೈತರು ಈ ಯೋಜನೆಯಡಿ ನೊಂದಾಯಿಸಲು ಮುಸುಕಿನ ಜೋಳ
ಬೆಳೆಗೆ ಜು.31 ಮತ್ತು ಜೋಳ, ರಾಗಿ ಬೆಳೆಗಳಿಗೆ ಆ.16 ಕೊನೆಯ ದಿನಾಂಕವಾಗಿರುತ್ತದೆ.
ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಸರ್ಕಾರದಿಂದ ಆಯ್ಕೆಯಾದ ಅಗ್ರಿಕಲ್ಚರ್
ಇನ್ಶ್ಯೂರೆನ್ಸ್ ಕಂಪನಿ ಆಫ್ ಇಂಡಿಯಾ ಸಂಸ್ಥೆ ಇವರ ಸಹಯೋಗದೊಂದಿಗೆ
ಅನುಷ್ಠಾನಗೊಳಿಸಲಾಗುವುದು. ಬಿತ್ತನೆ/ನಾಟಿ ಮಾಡುವುದಕ್ಕಿಂತ ಮುಂಚಿತವಾಗಿಯೇ
ನೊಂದಾಯಿಸಲು ಅವಕಾಶವಿರುತ್ತದೆ. ಬೆಳೆ ಸಾಲ ಪಡೆಯುವ ರೈತರನ್ನು ಬೆಳೆ ವಿಮೆ ಯೋಜನೆಯಡಿ
ಕಡ್ಡಾಯವಾಗಿ ಒಳಪಡಿಸಲಾಗುವುದು, ಬೆಳೆಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು
ಇಚ್ಛೆ ಪಡದೇ ಇದ್ದಲ್ಲಿ ಬೆಳೆ ನೊಂದಣಿ ಅಂತಿಮ ದಿನಾಂಕಕ್ಕೆ 7 ದಿನಗಳ ಮುಂಚಿತವಾಗಿ ಲಿಖಿತ
ಮುಚ್ಚಳಿಕೆ ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು. ಬೆಳೆ
ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ ಮತ್ತು
ಆಧಾರ್ ಸಂಖ್ಯೆ ಸಹಿತ ತಮಗೆ ಹತ್ತಿರವಿರುವ ಬ್ಯಾಂಕ್/ಆರ್ಥಿಕ ಸಂಸ್ಥೆಗಳು/ಸಾರ್ವಜನಿಕ ಸೇವಾ
ಕೇಂದ್ರಗಳಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆ, ಸಮೀಪವಿರುವ
ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಸಂರಕ್ಷಣೆ ವೆಬ್ಸೈಟ್
hಣಣಠಿ://sಚಿmಡಿಞshಚಿಟಿe.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿಯೂ ಸಹ ಮಾಹಿತಿ ಪಡೆಯಬಹುದೆಂದು ಜಂಟಿ
ಕೃಷಿ ನಿರ್ದೇಶಕರಾದ ಪೂರ್ಣಿಮ ಜಿ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.