ಶಿವಮೊಗ್ಗ, ಜುಲೈ 07 :ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2022-23 ನೇ ಸಾಲಿಗೆ ಕರೆಯಲಾಗಿದ್ದ ಶುಲ್ಕ ಮರುಪಾವತಿ ಆನ್ಲೈನ್ ಅರ್ಜಿ ಅವಧಿಯನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ.ಈ ಹಿಂದೆ ಅರ್ಜಿ ಅವಧಿಯನ್ನು ಜುಲೈ 06 ರವರೆಗೆ ನಿಗದಿಪಡಿಸಲಾಗಿತ್ತು. ಅರ್ಜಿಯನ್ನು ಆನ್ಲೈನ್ ಮೂಲಕ ವೆಬ್ಸೈಟ್ www//ssp.postmatric.karnataka.gov.in ಸಲ್ಲಿಸಬೇಕು. ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನೋಡಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ಸಹಾಯವಾಣಿ ಸಂಖ್ಯೆ 8050770005/08182-222129, 080-35254757, ಇಮೇಲ್ bಛಿತಿಜheಟಠಿಟiಟಿe@gmಚಿiಟ.ಛಿom, ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.