ಕ್ಲಿನಿಕಲ್ ಸೈಕಾಲಜಿ ಸೊಸೈಟಿ ಆಫ್ ಇಂಡಿಯಾ ಹಾಗೂ ನಿಮ್ಹಾನ್ಸ್‌ನ ಕ್ಲಿನಿಕಲ್ ಸೈಕಾಲಜಿ ವಿಭಾಗದ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ನಡೆದ ಮೂರು ದಿನದ ಮಾನಸಿಕ ಆರೋಗ್ಯ ಕುರಿತ ತಜ್ಞರ ವಾರ್ಷಿಕ ರಾಷ್ಟ್ರೀಯ ಸಮ್ಮೇಳನದಲ್ಲಿ ಶಿವಮೊಗ್ಗದ ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಮನಃಶಾಸ್ತ್ರ ವಿಭಾಗದ ಉಪನ್ಯಾಸಕರಾದ ಹನಿ ಕುರುವರಿ ಅವರ ಮಾರ್ಗದರ್ಶನದೊಂದಿಗೆ ಎಂಎಸ್ಸಿ ಮನಃಶಾಸ್ತ್ರದ ಅಂತಿಮ ವರ್ಷದ ವಿದ್ಯಾರ್ಥಿನಿಯಾದ ಕುಮಾರಿ ಪೂಜಾ ನಾರಾಯಣ್ ಸಿದ್ಧಿ ಅವರು ನಡೆಸಿದ ‘ಸಿದ್ದಿ ಸಮುದಾಯದಲ್ಲಿ ಸಾಮಾಜಿಕ ಬೆಂಬಲ, ಭರವಸೆ ಮತ್ತು ಮಾನಸಿಕ ಯೋಗಕ್ಷೇಮದ ಅಧ್ಯಯನ’ ಎಂಬ ವಿಷಯದ ಮೇಲಿನ ಸಂಶೋಧನೆಗೆ ರಾಷ್ಟ್ರಮಟ್ಟದ ಅತ್ಯುತ್ತಮ ಸಂಶೋಧನಾ ಪತ್ರಿಕೆ ಪ್ರಶಸ್ತಿಯು ದೊರೆತಿದೆ.

ಈ ರಾಷ್ಟ್ರಮಟ್ಟದ ಸಮ್ಮೇಳನದಲ್ಲಿ 2500 ಕ್ಕೂ ಹೆಚ್ಚಿನ ಮನೋವೈದ್ಯರು, ಮಾನಸಿಕ ತಜ್ಞರು, ಮನಃಶಾಸ್ತ್ರಜ್ಞರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಶಸ್ತಿ ಪಡೆದ ವಿದ್ಯಾರ್ಥಿನಿಗೆ ಮಾನಸ ಟ್ರಸ್ಟ್ ನ ನಿರ್ದೇಶಕರಾದ ಡಾ.ರಜನಿ ಎ ಪೈ, ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಡಾ. ಪ್ರೀತಿ ವಿ ಶಾನ್ ಭಾಗ್, ಡಾ.ವಾಮನ್ ಶಾನ್ ಭಾಗ್, ಎಂಸಿಸಿಎಸ್ ನ ನಿರ್ದೇಶಕರಾದ ಡಾ.ರಾಜೇಂದ್ರ ಚೆನ್ನಿ, ಕಾಲೇಜಿನ ಪ್ರಾಂಶುಪಾಲೆ ಡಾ. ಸಂಧ್ಯಾ ಕಾವೇರಿ, ಮನಃಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಅರ್ಚನ ಕೆ ಭಟ್, ಮನಃಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀದೇವಿ, ಹನಿ ಕುರುವರಿ, ಇಂಚರ, ವಿನಯ್ ಹಾಗೂ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿ ವೃಂದ ಅಭಿನಂದಿಸಿದೆ.

error: Content is protected !!