ಶಿವಮೊಗ: ಕೈಮಗ್ಗ ಮತ್ತು ಜವುಳಿ ಇಲಾಖೆಯು ಪ್ರಸಕ್ತ ಸಾಲಿನ ನೂತನ ಜವಳಿ ನೀತಿ ಯೋಜನೆಯಡಿ ಜವಳಿ ಘಟಕ ಸ್ಥಾಪಿಸಲು ಇಲಾಖೆಯಿಂದ ದೊರೆಯುವ ಸೌಲಭ್ಯಗಳು ಹಾಗೂ ಇಲಾಖಾ ಯೋಜನೆಗಳ ಕುರಿತು ಶಿವಮೊಗ್ಗದಲ್ಲಿ 2ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಜುಲೈ ಮಾಸಾಂತ್ಯದಲ್ಲಿ ಆಯೋಜಿಸಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ನಿಗಧಿತ ನಮೂನೆಯ ಅರ್ಜಿ ಹಾಗೂ ಮಾಹಿತಿಗಾಗಿ ಉಪನಿರ್ದೇಶಕರು, ಕೈಮಗ್ಗ ಮತ್ತು ಜವುಳಿ ಇಲಾಖೆ, ಮಂಜುನಾಥ ಟವರ್ಸ್, 2ನೇ ಮಹಡಿ, ಶಿವಮೊಗ್ಗ ದೂರವಾಣಿ : 08182-223405ನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವುಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!