ಶಿವಮೊಗ್ಗ:: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2019-20ನೇ ಸಾಲಿಗೆ ಜಿಲ್ಲೆಯಲ್ಲಿ ಗುರುಗಳ ಮುಖಾಂತರ ಅಕಾಡೆಮಿ ವ್ಯಾಪ್ತಿಗೊಳಪಡುವ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನ, ಗಮಕ ಕಲಾಪ್ರಕಾರಗಳಲ್ಲಿ ಕಲಿಯಲು ಆಸಕ್ತಿಯುಳ್ಳ, ಅಭ್ಯಾಸ ಮಾಡುತ್ತಿರುವ, ಹೆಚ್ಚಿನ ಅಭ್ಯಾಸ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗೆ 5ತಿಂಗಳವರೆಗೆ ತರಬೇತಿ ನೀಡಲು ಉದ್ದೇಶಸಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
14ರಿಂದ 26ವರ್ಷ ವಯೋಮಾನದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಅಕಾಡೆಮಿಯ ಕಚೇರಿಯಲ್ಲಿ ಅಥವಾ ಅಕಾಡೆಮಿಯ ಜಾಲತಾಣ www.karnatakasangeetanrityaacademy.com ಮೂಲಕ ಪಡೆದು ಸಲ್ಲಿಸಬಹುದಾಗಿದೆ. ಅಥವಾ ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 30ರೊಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ವಿಳಾಸಕ್ಕೆ ಸಲ್ಲಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಅಶೋಕ ಎಚ್.ಛಲವಾದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!