ಡಾ: ಪ್ರಕಾಶ್ ನಡೂರ್, ಡೀನ್, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರಿಗೆ ಕರ್ನಾಟಕ ಪಶುವೈದ್ಯಕೀಯ ಸಂಘವು 2019 ನೇ ಸಾಲಿನ “ನಕುಲ” ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ನೀಡಿ ಗೌರವಿಸಿದೆ. ಇವರು ಪಶುವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಅನುಪಮ ಕೊಡುಗೆಗಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಇವರು ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರದಲ್ಲಿ ಉಪಕುಲಸಚಿವರ ಹುದ್ದೆಯೂ ಸೇರಿದಂತೆ ಹಲವಾರು ಜವಾಬ್ದಾರಿಯುತ ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿರುತ್ತಾರೆ. ಇವರು ಪಶುವೈದ್ಯಕೀಯ ಔಷಧಶಾಸ್ತ್ರ ಮತ್ತು ವಿಷಶಾಸ್ತ್ರ ವಿಭಾಗಕ್ಕೆ ಸಲ್ಲಿಸಿದ ಗಣನೀಯ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ.

error: Content is protected !!